Gold and Silver Price: ಪ್ರೀತಿಪಾತ್ರರಿಗಾಗಿ ಆಭರಣ ಖರೀದಿಸುವ ಬಯಕೆ ಇದೆಯೇ? ಇಲ್ಲಿದೆ ಚಿನ್ನ, ಬೆಳ್ಳಿ ದರ ವಿವರ ಚೆಕ್ ಮಾಡಿ
Gold Rate Today: ಕಳೆದ ಎರಡು ದಿನಗಳಿಂದ ಆಭರಣದ ಬೆಲೆ ಏರಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಫೆಬ್ರವರಿ 10, ಗುರುವಾರ) ಕೂಡ ಚಿನ್ನದ ದರ ಏರಿಕೆಯಾಗಿದೆ. ಬೆಳ್ಳಿ ದರ ಕೂಡ ಏರಿಕೆಯತ್ತ ಸಾಗಿದೆ. ಇಂದು ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
Gold and Silver Price Today| ಬೆಂಗಳೂರು: ಮದುವೆ ಅಥವಾ ಇನ್ನಿತರ ಸಮಾರಂಭಗಳು ಎದುರಿಗಿರುವಾಗ ಚಿನ್ನ ಖರೀದಿಸುವುದು ಒಂದು ರೀತಿಯ ವಾಡಿಕೆಯಾಗಿ ಪರಿಣಮಿಸಿದೆ. ಸಮಾರಂಭಗಳ ನೆಪದಲ್ಲಿ ಒಂದಷ್ಟು ಚಿನ್ನದ ಒಡವೆಗಳನ್ನು ಕೊಂಡಕೊಂಡರೆ ಮತ್ತಷ್ಟು ಬೆಳ್ಳಿ ಒಡವೆಗಳನ್ನು ಖರೀದಿಸುವುದು ಇದೆ. ಚಿನ್ನ, ಬೆಳ್ಳಿ ಎಂದರೆ ಎಲ್ಲರಿಗೂ ಪ್ರೀತಿ ಅದರಲ್ಲೂ ಮಹಿಳೆಯರಿಗೆ ಆಭರಣದ ವಿಚಾರಕ್ಕೆ ಬಂದಾಗ ಕೊಂಚ ಜಾಸ್ತಿಯೇ ವ್ಯಾಮೋಹ ಇರುತ್ತದೆ. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಕಳೆದ ಎರಡು ದಿನಗಳಿಂದ ಆಭರಣದ ಬೆಲೆ ಏರಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಫೆಬ್ರವರಿ 10, ಗುರುವಾರ) ಕೂಡ ಚಿನ್ನದ ದರ (Gold Price) ಏರಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಏರಿಕೆಯತ್ತ ಸಾಗಿದೆ. ಇಂದು ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,500 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,600 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 66,800 ರೂಪಾಯಿ ದಾಖಲಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,780 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,900 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,800 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,500 ರೂಪಾಯಿ ಏರಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,600 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,800 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,600 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,560 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,970 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,800 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,700 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ: Gold and Silver Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳ ದರ ನೋಡಿ
Gold and Silver Price: ಚಿನ್ನ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ ಚೆಕ್ ಮಾಡಿ
Published On - 7:26 am, Thu, 10 February 22