AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಸ್ಥಿರ; ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

Gold Rate Today: ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಕುರಿತು ಎಲ್ಲರಿಗೂ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 12, ಶನಿವಾರ) ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold and Silver Price: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಸ್ಥಿರ; ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 12, 2022 | 7:43 AM

Share

Gold and Silver Price Today| ಬೆಂಗಳೂರು: ಆಭರಣಗಳ ಮೇಲೆ ಭಾರತೀಯರಿಗೆ ಪ್ರೀತಿ ಜಾಸ್ತಿ. ಸಭೆ- ಸಮಾರಂಭಗಳಲ್ಲಿ ಆಭರಣಗಳನ್ನು ಧರಿಸಿ ಮಿಂಚುವುದರಲ್ಲಿ ಯಾರೂ ಹಿಂದೆ ಬೀಳುವುದಿಲ್ಲ. ಇದೇ ಕಾರಣಕ್ಕೆ ಚಿನ್ನ, ಬೆಳ್ಳಿಯನ್ನು ಖರೀದಿಸುವ ಬಯಕೆ ಉಳ್ಳವರು ಅವುಗಳ ಮಾರುಕಟ್ಟೆ ಬೆಲೆಯನ್ನು ಗಮನಿಸುತ್ತಿರುತ್ತಾರೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡ ಈ ಆಭರಣಗಳೇ! ಹೀಗಿರುವಾಗ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಎಲ್ಲರಿಗೂ ತುಸು ಗೊಂದಲ ಇರುತ್ತದೆ. ಅದಕ್ಕಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಇಂದು (ಫೆಬ್ರವರಿ 12, ಶನಿವಾರ) ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಮೊದಲಾದ ವಿವರಗಳು ಇಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,970 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಏರಿಳಿತವಾಗಿಲ್ಲ. ಬೆಳ್ಳಿ ದರದಲ್ಲಿ ತುಸು ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,900 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ₹ 300 ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,230 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,02,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 300 ರೂಪಾಯಿ ಏರಿಕೆಯಾಗಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ 100 ರೂ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,900 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,000 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,970 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,700 ರೂಪಾಯಿ ನಿಗದಿಯಾಗಿದೆ. ಚಿನ್ನದ ದರದಲ್ಲಿ ಏರಿಳಿಕೆಯಾಗಿಲ್ಲ. ಬೆಳ್ಳಿ ದರದಲ್ಲಿ ಸ್ವಲ್ಪ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,900 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

EMI ನಲ್ಲಿ ಸ್ಮಾರ್ಟ್​​ಫೋನ್ ಖರೀದಿಸುತ್ತೀರಾ?: ಹಾಗಾದ್ರೆ ತಪ್ಪದೇ ಈ ಸ್ಟೋರಿ ಓದಿ

Horoscope Today- ದಿನ ಭವಿಷ್ಯ; ಈ ರಾಶಿಯ ವ್ಯಾಪಾರಿಗಳು ಈ ತಿಂಗಳು ಸರಾಸರಿ ಲಾಭ ಗಳಿಸುವ ಸಾಧ್ಯತೆಯಿದೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ