Gold and Silver Price: ದಾಖಲೆ ಮೊತ್ತದಲ್ಲಿ ಆಭರಣ ಮಾರಾಟ; ಗ್ರಾಹಕರೇ ಗಮನಿಸಿ ಚಿನ್ನ ಏರಿಕೆ, ಬೆಳ್ಳಿ ದರ ಇಳಿಕೆ
Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,64,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಆಗಿದೆ.
Gold and Silver Price Today| ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 16, ಬುಧವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,64,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,620 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,06,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,200 ರೂಪಾಯಿ ದಾಖಲಾಗಿದೆ. ಸುಮಾರು 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,960 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,69,600 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,230 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,12,300 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,200 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,64,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,620 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,06,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,200 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಇಳಿಕೆ ಆಗಿದೆ.
ಇದನ್ನೂ ಓದಿ:
Gold and Silver Rate: ಭಾರತದ ಪ್ರಮುಖ ನಗರಗಳಲ್ಲಿ ಫೆಬ್ರವರಿ 15ರ ಚಿನ್ನ, ಬೆಳ್ಳಿ ದರ ಇಂತಿದೆ
Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿನ ದರ ವಿವರ ಹೀಗಿದೆ
Published On - 7:33 am, Wed, 16 February 22