Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ಪರಿಶೀಲಿಸಿ

| Updated By: preethi shettigar

Updated on: Feb 18, 2022 | 7:39 AM

Gold Rate Today: ಇಂದು (ಫೆಬ್ರವರಿ 18, ಶುಕ್ರವಾರ) ಚಿನ್ನದ ದರ ಇಳಿಕೆಯಾಗಿದೆ. ಬೆಳ್ಳಿ ದರ ಏರಿಕೆಯತ್ತ ಸಾಗಿದೆ. ಇಂದು ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Follow us on

Gold and Silver Price Today| ಬೆಂಗಳೂರು: ಮದುವೆ ಅಥವಾ ಇನ್ನಿತರ ಸಮಾರಂಭಗಳು ಎದುರಿಗಿರುವಾಗ ಚಿನ್ನ ಖರೀದಿಸುವುದು ಒಂದು ರೀತಿಯ ವಾಡಿಕೆಯಾಗಿ ಪರಿಣಮಿಸಿದೆ. ಸಮಾರಂಭಗಳ ನೆಪದಲ್ಲಿ ಒಂದಷ್ಟು ಚಿನ್ನದ ಒಡವೆಗಳನ್ನು ಕೊಂಡಕೊಂಡರೆ ಮತ್ತಷ್ಟು ಬೆಳ್ಳಿ ಒಡವೆಗಳನ್ನು ಖರೀದಿಸುವುದು ಇದೆ. ಚಿನ್ನ, ಬೆಳ್ಳಿ ಎಂದರೆ ಎಲ್ಲರಿಗೂ ಪ್ರೀತಿ ಅದರಲ್ಲೂ ಮಹಿಳೆಯರಿಗೆ(Women) ಆಭರಣದ ವಿಚಾರಕ್ಕೆ ಬಂದಾಗ ಕೊಂಚ ಜಾಸ್ತಿಯೇ ವ್ಯಾಮೋಹ ಇರುತ್ತದೆ. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ.  ಇಂದು (ಫೆಬ್ರವರಿ 18, ಶುಕ್ರವಾರ) ಚಿನ್ನದ ದರ (Gold Price) ಇಳಿಕೆಯಾಗಿದೆ. ಬೆಳ್ಳಿ ದರ (Silver Price) ಏರಿಕೆಯತ್ತ ಸಾಗಿದೆ. ಇಂದು ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,00 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 59,970 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 4,300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,000 ರೂಪಾಯಿ ದಾಖಲಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,000 ರೂಪಾಯಿ ನಿಗದಿಯಾಗಿದೆ. ಸುಮಾರು 4,500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,13,800 ರೂಪಾಯಿ ನಿಗದಿಯಾಗಿದೆ. ಸುಮಾರು 5,300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,000 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,970 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,99,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,300 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,000 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,000 ರೂಪಾಯಿ ನಿಗದಿಯಾಗಿದೆ. ಸುಮಾರು 4.000 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,970 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,700 ರೂಪಾಯಿ ನಿಗದಿಯಾಗಿದೆ. ಸುಮಾರು 4,300 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 63,400 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:
Gold and Silver Rate: ಬೆಂಗಳೂರು, ಮೈಸೂರು ಸೇರಿ ಪ್ರಮುಖ ನಗರಗಳಲ್ಲಿ ಫೆಬ್ರವರಿ 17ರ ಚಿನ್ನ, ಬೆಳ್ಳಿ ದರ ಹೀಗಿದೆ

Gold and Silver Rate: ಬೆಂಗಳೂರು ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಫೆಬ್ರವರಿ 16ರ ಚಿನ್ನ, ಬೆಳ್ಳಿ ದರ ಇಂತಿದೆ

 

Published On - 7:28 am, Fri, 18 February 22