AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ; ವಿವಿಧ ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,000 ರೂಪಾಯಿ ಏರಿಕೆ ಆಗಿದೆ.

Gold and Silver Price: ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ; ವಿವಿಧ ಪ್ರಮುಖ ನಗರಗಳ ದರ ವಿವರ ಇಲ್ಲಿದೆ
ಚಿನ್ನ
TV9 Web
| Edited By: |

Updated on:Feb 19, 2022 | 7:35 AM

Share

Gold and Silver Price Today| ಬೆಂಗಳೂರು: ಆಭರಣಗಳ ಮೇಲೆ ಭಾರತೀಯರಿಗೆ ಪ್ರೀತಿ ಜಾಸ್ತಿ. ಸಭೆ- ಸಮಾರಂಭಗಳಲ್ಲಿ ಆಭರಣಗಳನ್ನು ಧರಿಸಿ ಮಿಂಚುವುದರಲ್ಲಿ ಯಾರೂ ಹಿಂದೆ ಬೀಳುವುದಿಲ್ಲ. ಇದೇ ಕಾರಣಕ್ಕೆ ಚಿನ್ನ, ಬೆಳ್ಳಿಯನ್ನು ಖರೀದಿಸುವ ಬಯಕೆ ಉಳ್ಳವರು ಅವುಗಳ ಮಾರುಕಟ್ಟೆ ಬೆಲೆಯನ್ನು ಗಮನಿಸುತ್ತಿರುತ್ತಾರೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡ ಈ ಆಭರಣಗಳೇ! ಹೀಗಿರುವಾಗ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಎಲ್ಲರಿಗೂ ತುಸು ಗೊಂದಲ ಇರುತ್ತದೆ. ಅದಕ್ಕಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold Price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಇಂದು (ಫೆಬ್ರವರಿ 19, ಶನಿವಾರ) ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಮೊದಲಾದ ವಿವರಗಳು ಇಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 5,400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,600 ರೂಪಾಯಿ ದಾಖಲಾಗಿದೆ. ಸುಮಾರು 600 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,290 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,900 ರೂಪಾಯಿ ನಿಗದಿಯಾಗಿದೆ. ಸುಮಾರು 1,900 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,15,900 ರೂಪಾಯಿ ನಿಗದಿಯಾಗಿದೆ. ಸುಮಾರು 2,100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,600 ರೂಪಾಯಿ ನಿಗದಿಯಾಗಿದೆ. ಸುಮಾರು 600 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,400 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,600 ರೂಪಾಯಿ ನಿಗದಿಯಾಗಿದೆ. ಸುಮಾರು 600 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,000 ರೂಪಾಯಿ ನಿಗದಿಯಾಗಿದೆ. ಸುಮಾರು 5,000 ರೂಪಾಯಿಯಷ್ಟು ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,100 ರೂಪಾಯಿ ನಿಗದಿಯಾಗಿದೆ. ಸುಮಾರು 5,400 ರೂಪಾಯಿಯಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 63,800 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold and Silver Rate: ಬೆಂಗಳೂರು, ಮೈಸೂರು ಸೇರಿ ಪ್ರಮುಖ ನಗರಗಳಲ್ಲಿ ಫೆಬ್ರವರಿ 17ರ ಚಿನ್ನ, ಬೆಳ್ಳಿ ದರ ಹೀಗಿದೆ

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ಪರಿಶೀಲಿಸಿ

Published On - 7:23 am, Sat, 19 February 22

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ