AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ನಿಮ್ಮೂರಿನ ದರ ವಿವರ ಇಲ್ಲಿದೆ ಚೆಕ್​ ಮಾಡಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ.

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ನಿಮ್ಮೂರಿನ ದರ ವಿವರ ಇಲ್ಲಿದೆ ಚೆಕ್​ ಮಾಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 20, 2022 | 7:47 AM

Share

Gold and Silver Price Today| ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 20, ಭಾನುವಾರ) ಚಿನ್ನ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಬೆಳ್ಳಿ ಬೆಲೆ ಏರಿಕೆಯಾಗಿದೆ. ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 70,000 ರೂಪಾಯಿ ದಾಖಲಾಗಿದೆ. ಸುಮಾರು 1,400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,330 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,300 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,630 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,16,300 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದೆ. ಕೆಜಿ ಬೆಳ್ಳಿಗೆ 68,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,200 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 70,000 ರೂಪಾಯಿ ನಿಗದಿಯಾಗಿದೆ. ಸುಮಾರು 1,400 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ಸುಮಾರು 3,000 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ. ಸುಮಾರು 3,200 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 64,000 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold and Silver Price: ಬೆಂಗಳೂರಿನಲ್ಲಿ ಚಿನ್ನ ದರ ಸ್ಥಿರ, ಬೆಳ್ಳಿ ಬೆಲೆ ಬಾರಿ ಇಳಿಕೆ

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ಪರಿಶೀಲಿಸಿ

Published On - 7:37 am, Sun, 20 February 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!