Gold and Silver Price: ಚಿನ್ನ ಏರಿಕೆ, ಬೆಳ್ಳಿ ಬೆಲೆ ಸ್ಥಿರ; ನಿಮ್ಮೂರಿನಲ್ಲಿ ಆಭರಣ ದರ ಎಷ್ಟಿದೆ?
Gold Rate Today: ಇಂದು (ಫೆಬ್ರವರಿ 23, ಬುಧವಾರ) ಚಿನ್ನದ ದರ (Gold Price) ಏರಿಕೆಯಾಗಿದೆ. ಬೆಳ್ಳಿ ದರ (Silver Price) ಸ್ಥಿರವಾಗಿದೆ. ಇಂದು ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
Gold and Silver Price Today| ಬೆಂಗಳೂರು: ಮದುವೆ ಅಥವಾ ಇನ್ನಿತರ ಸಮಾರಂಭಗಳು ಎದುರಿಗಿರುವಾಗ ಚಿನ್ನ ಖರೀದಿಸುವುದು ಒಂದು ರೀತಿಯ ವಾಡಿಕೆಯಾಗಿ ಪರಿಣಮಿಸಿದೆ. ಸಮಾರಂಭಗಳ ನೆಪದಲ್ಲಿ ಒಂದಷ್ಟು ಚಿನ್ನದ ಒಡವೆಗಳನ್ನು ಕೊಂಡಕೊಂಡರೆ ಮತ್ತಷ್ಟು ಬೆಳ್ಳಿ ಒಡವೆಗಳನ್ನು ಖರೀದಿಸುವುದು ಇದೆ. ಚಿನ್ನ, ಬೆಳ್ಳಿ ಎಂದರೆ ಎಲ್ಲರಿಗೂ ಪ್ರೀತಿ ಅದರಲ್ಲೂ ಮಹಿಳೆಯರಿಗೆ(Women) ಆಭರಣದ ವಿಚಾರಕ್ಕೆ ಬಂದಾಗ ಕೊಂಚ ಜಾಸ್ತಿಯೇ ವ್ಯಾಮೋಹ ಇರುತ್ತದೆ. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಇಂದು (ಫೆಬ್ರವರಿ 23, ಬುಧವಾರ) ಚಿನ್ನದ ದರ (Gold Price) ಏರಿಕೆಯಾಗಿದೆ. ಬೆಳ್ಳಿ ದರ (Silver Price) ಸ್ಥಿರವಾಗಿದೆ. ಇಂದು ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3.500 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,460 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,04,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 4,100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಸ್ಥಿರತೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 70,000 ರೂಪಾಯಿ ದಾಖಲಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,620 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,76,200 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 52,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,20,000 ರೂಪಾಯಿ ನಿಗದಿಯಾಗಿದೆ. ಸುಮಾರು 4,300 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,100 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,460 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,04,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ದರ ಇಂದು ಸ್ಥಿರವಾಗಿದೆ. ಕೆಜಿ ಬೆಳ್ಳಿಗೆ 70,000 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,500 ರೂಪಾಯಿ ನಿಗದಿಯಾಗಿದೆ. ಸುಮಾರು 3,500 ರೂಪಾಯಿಯಷ್ಟು ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,460 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,04,600 ರೂಪಾಯಿ ನಿಗದಿಯಾಗಿದೆ. ಸುಮಾರು 4,100 ರೂಪಾಯಿಯಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 64,400 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ: Gold and Silver Price: ಆಭರಣ ಖರೀದಿಗೂ ಮುನ್ನ ದರ ವಿವರ ಪರಿಶೀಲಿಸಿ; ಇಲ್ಲಿದೆ ಇಂದಿನ ಚಿನ್ನ, ಬೆಳ್ಳಿ ಬೆಲೆ
Gold and Silver Price: ಇಂದು ಆಭರಣ ಖರೀದಿಸುವವರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ದರ ಇಳಿಕೆ
Published On - 7:23 am, Wed, 23 February 22