Gold and Silver Price Today|ಬೆಂಗಳೂರು: ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ನಿನ್ನೆ ಆಭರಣದ ಬೆಲೆ ಇಳಿಕೆಯಾಗಿತ್ತು. ಇಂದು (ಜನವರಿ 04, ಮಂಗಳವಾರ) ಕೂಡ ಚಿನ್ನದ ದರ (Gold Price) ಇಳಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,400 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,400 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,200 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,400 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,200 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 900 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 62,400 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ:
Gold Rate: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಬೆಲೆ ವಿವರ ಇಲ್ಲಿದೆ
Gold Rate: ಆಭರಣ ಪ್ರಿಯರಿಗೆ ಹೊಸ ವರ್ಷದಂದೇ ಶಾಕ್; ಒಮ್ಮೆಲೇ ಏರಿಕೆಯಾದ ಚಿನ್ನ, ಬೆಳ್ಳಿ ದರ!
Published On - 7:23 am, Tue, 4 January 22