Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ!

Gold Silver Price Today: ಇಂದು (ಜನವರಿ 05, ಬುಧವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Jan 05, 2022 | 7:34 AM

ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 05, ಬುಧವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,500 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,700 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,700 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,170 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,300 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,230 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 4,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,700 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,500 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,700 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,700 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,260 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,600 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,260 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,700 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಆಭರಣ ಪ್ರಿಯರಿಗೆ ಸಂತೋಷದ ವಿಚಾರ; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!

Gold Rate: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಬೆಲೆ ವಿವರ ಇಲ್ಲಿದೆ

Published On - 7:16 am, Wed, 5 January 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ