Gold Rate: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ನಿಮ್ಮೂರಿನಲ್ಲಿ ಆಭರಣಗಳ ಬೆಲೆ ಎಷ್ಟಿದೆ ತಿಳಿಯಿರಿ

Gold Rate: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ನಿಮ್ಮೂರಿನಲ್ಲಿ ಆಭರಣಗಳ ಬೆಲೆ ಎಷ್ಟಿದೆ ತಿಳಿಯಿರಿ
ಸಂಗ್ರಹ ಚಿತ್ರ

Gold Silver Price Today: ಇಂದು (ಜನವರಿ 07, ಶುಕ್ರವಾರ) ಚಿನ್ನದ ದರ ಇಳಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು.

TV9kannada Web Team

| Edited By: preethi shettigar

Jan 07, 2022 | 7:33 AM

Gold and Silver Price Today|ಬೆಂಗಳೂರು: ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಇಂದು (ಜನವರಿ 07, ಶುಕ್ರವಾರ) ಚಿನ್ನದ ದರ (Gold Price) ಇಳಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 60,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,170 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,800 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,230 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,500 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,400 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,400 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,300 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2500 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 60,600 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಬೆಲೆ ವಿವರ ಇಲ್ಲಿದೆ

Gold Rate: ಆಭರಣ ಪ್ರಿಯರಿಗೆ ಸಂತೋಷದ ವಿಚಾರ; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ

Follow us on

Related Stories

Most Read Stories

Click on your DTH Provider to Add TV9 Kannada