Gold Rate: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಆಭರಣ ಖರೀದಿಸುವ ಬಯಕೆ ಇದ್ದರೆ ದರ ವಿವರ ಪರಿಶೀಲಿಸಿ

Gold Rate: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಆಭರಣ ಖರೀದಿಸುವ ಬಯಕೆ ಇದ್ದರೆ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ

Gold Silver Price Today: ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 08, ಶನಿವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

TV9kannada Web Team

| Edited By: preethi shettigar

Jan 08, 2022 | 7:42 AM

Gold and Silver Price Today| ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವ ಬಯಕೆ ಎಲ್ಲರಲ್ಲಿಯೂ ಸಾಮಾನ್ಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 08, ಶನಿವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,500 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,900 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 60,400 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,860 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,100 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,940 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,900 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,500 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,900 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,500 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,100 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,85,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,200 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 60,400 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ನಿಮ್ಮೂರಿನಲ್ಲಿ ಆಭರಣಗಳ ಬೆಲೆ ಎಷ್ಟಿದೆ ತಿಳಿಯಿರಿ

Gold Rate: ಆಭರಣ ಪ್ರಿಯರಿಗೆ ಶಾಕ್! ಚಿನ್ನ, ಬೆಳ್ಳಿ ದರ ಏರಿಕೆ

Follow us on

Related Stories

Most Read Stories

Click on your DTH Provider to Add TV9 Kannada