AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ.

Gold Rate: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ
ಸಂಗ್ರಹ ಚಿತ್ರ
TV9 Web
| Edited By: |

Updated on:Jan 12, 2022 | 7:37 AM

Share

Gold and Silver Price Today| ಬೆಂಗಳೂರು: ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಕಳೆದ ಮೂರು ದಿನಗಳಿಂದ ಆಭರಣದ ಬೆಲೆ ಏರಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಜನವರಿ 12, ಬುಧವಾರ) ಕೂಡ ಚಿನ್ನದ ದರ (Gold Price) ಏರಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಏರಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,870 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,500 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,600 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,85,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 200 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 60,800 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಆಭರಣ ಖರೀದಿಸುವ ಬಯಕೆ ಇದ್ದರೆ ದರ ವಿವರ ಪರಿಶೀಲಿಸಿ

Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ!

Published On - 7:26 am, Wed, 12 January 22

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ