Gold Rate: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿ ದರ ಎಷ್ಟಿದೆ?

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಏರಿಕೆಯಾಗಿದೆ.

Gold Rate: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿ ದರ ಎಷ್ಟಿದೆ?
ಸಾಂದರ್ಭಿಕ ಚಿತ್ರ

Gold and Silver Price Today| ಬೆಂಗಳೂರು: ಚಿನ್ನದ ಮೇಲೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಹಬ್ಬ-ಹರಿದಿನಗಳ ಸಾಲು ಬಂದರೆ ಚಿನ್ನಾಭರಣಗಳನ್ನು ಖರೀದಿ ಹೆಚ್ಚುತ್ತದೆ. ಆದರೆ ಚಿನ್ನದ ಬೆಲೆ ಒಂದು ದಿನವಿದ್ದಂತೆ ಮತ್ತೊಂದು ದಿನ ಇರುವುದಿಲ್ಲ. ದೇಶಾದ್ಯಂತ ಬೆಲೆ ವ್ಯತ್ಯಾಸವಾಗುತ್ತಿರುತ್ತದೆ. ದೈನಂದಿನ ದರದಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಸಹಜ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇಂದು (ಜನವರಿ 13) ಕೂಡ ಬೆಲೆ ಏರಿಕೆಯಾಗಿದೆ. ಆದರೆ ಬೆಳ್ಳಿ ದರ (Silver Price) ಇಳಿಕೆಯಾಗಿದೆ. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,200 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,000 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,300 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,010 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 600 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 3,600 ರೂ ಇಳಿಕೆಯಾಗಿದ್ದು, 61,000 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,880 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,200 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,000 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,940 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,69,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,940 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,500 ರೂ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 65,000 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:

Petrol Price Today: ಎಷ್ಟಿದೆ ಇಂದು ಪೆಟ್ರೋಲ್​-ಡೀಸೆಲ್​ ಬೆಲೆ?, ಎಸ್​ಎಂಎಸ್ ಮೂಲಕವೇ ತೈಲ ಬೆಲೆ ತಿಳಿಯುವ ವಿಧಾನ ಹೇಗೆ? ಇಲ್ಲಿದೆ ಮಾಹಿತಿ​

Published On - 9:41 am, Thu, 13 January 22

Click on your DTH Provider to Add TV9 Kannada