Gold Rate: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿ ಆಭರಣದ ದರ ಹೀಗಿದೆ

| Updated By: preethi shettigar

Updated on: Jan 14, 2022 | 7:44 AM

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ.

Gold Rate: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿ ಆಭರಣದ ದರ ಹೀಗಿದೆ
ಚಿನ್ನಾಭರಣ
Follow us on

Gold and Silver Price Today| ಬೆಂಗಳೂರು: ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಇಂದು (ಜನವರಿ 14, ಶುಕ್ರವಾರ) ಚಿನ್ನದ ದರ (Gold Price) ಏರಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಏರಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,200 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,000 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,900 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 8,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,000 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,000 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,600 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 62,000 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:
Gold Rate: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿ ದರ ಎಷ್ಟಿದೆ?

Gold Rate: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಆಭರಣ ಖರೀದಿಸುವ ಬಯಕೆ ಇದ್ದರೆ ದರ ವಿವರ ಪರಿಶೀಲಿಸಿ

 

Published On - 7:25 am, Fri, 14 January 22