AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Rate Today: ಬೆಂಗಳೂರು ಸಹಿತ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

Gold Silver Price Today: 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.

Gold and Silver Rate Today: ಬೆಂಗಳೂರು ಸಹಿತ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ
ಚಿನ್ನದ ಬಳೆಗಳು
TV9 Web
| Edited By: |

Updated on: Jan 16, 2022 | 7:39 AM

Share

ಬೆಂಗಳೂರು: ಹೊಸ ವರ್ಷ ಕಾಲಿರಿಸಿದೆ. ಸಂಕ್ರಾಂತಿ ಹಬ್ಬ ಎಲ್ಲರೂ ಮನೆಯಲ್ಲಿ ಮನೆಯವರೊಂದಿಗೆ ಹಬ್ಬ ಆಚರಣೆ ಮಾಡಿರುತ್ತೀರಿ. ಹೊಸ ವರ್ಷದಲ್ಲಿ ಚಿನ್ನ ಖರೀದಿಸಬೇಕು ಎಂಬ ಆಸೆ ನಿಮ್ಮಲ್ಲಿ ಹಾಗೇ ಉಳಿದಿರಬಹುದು. ಚಿನ್ನ ಕೊಳ್ಳಲು ಸಕಾಲ ಬರಲಿ ಎಂದು ನೀವು ಕಾಯುತ್ತಿರಬಹುದು. ಚಿನ್ನ ಖರೀದಿ ಹಲವರ ಆಸೆ. ಅದರಲ್ಲೂ ಮಹಿಳೆಯರಂತೂ ವಿವಿಧ ಕಾರಣಗಳಿಂದ ಚಿನ್ನ ಖರೀದಿಗೆ ಆಸಕ್ತಿ ಹೊಂದಿರುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಈ ಬಗ್ಗೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 16, ಭಾನುವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,370 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,700 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,500 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಕೊಂಚ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,080 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,800 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,080 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,800 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,600 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ಗೆ ನುಗ್ಗಿ ಚಾಕು ತೋರಿಸಿ ನಗದು- ಚಿನ್ನ ದರೋಡೆ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್