Gold and Silver Rate Today: ಚಿನ್ನ, ಬೆಳ್ಳಿ ಕೊಂಡುಕೊಳ್ಳಲು ಇದು ಸರಿಯಾದ ಸಮಯವೇ? ಎಷ್ಟಿದೆ ದರ?

| Updated By: ganapathi bhat

Updated on: Jan 17, 2022 | 8:21 AM

Gold Silver Price Today: ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 17, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold and Silver Rate Today: ಚಿನ್ನ, ಬೆಳ್ಳಿ ಕೊಂಡುಕೊಳ್ಳಲು ಇದು ಸರಿಯಾದ ಸಮಯವೇ? ಎಷ್ಟಿದೆ ದರ?
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಹೊಸ ವರ್ಷ ಕಾಲಿರಿಸಿದೆ. ಈ ವರ್ಷ ಚಿನ್ನ ಖರೀದಿ ಮಾಡಬೇಕು, ಬೆಳ್ಳಿ ಕೊಂಡುಕೊಳ್ಳಬೇಕು ಎಂದು ಹಲವರು ಅಂದುಕೊಂಡಿರಬಹುದು. ಕೊರೊನಾ ಕಾರಣದಿಂದ ವಿವಾಹ ಮುಂತಾದ ಕಾರ್ಯಕ್ರಮಗಳು ಸೀಮಿತ ಜನರ ನಡುವೆ ನಡೆಯುತ್ತಿದ್ದರು ಕೂಡ ಒಡವೆ ಖರೀದಿ ಚಿನ್ನ ಖರೀದಿ ಆಸಕ್ತಿ ಏನೂ ಕಡಿಮೆ ಆಗಬೇಕೆಂದಿಲ್ಲ. ಹಲವರು ಅದನ್ನು ಹೂಡಿಕೆಯ ರೂಪದಲ್ಲಿ ನೋಡುವುದಿದೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಈ ಬಗ್ಗೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 17, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,900 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,090 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,900 ರೂಪಾಯಿ ನಿಗದಿಯಾಗಿದೆ. ಚಿನ್ನದ ದರ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಬದಲಾವಣೆ ಆಗದೆ, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,400 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,440 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,400 ರೂಪಾಯಿ ನಿಗದಿಯಾಗಿದೆ. ಚಿನ್ನದ ದರ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಬದಲಾವಣೆ ಆಗದೆ, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,090 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,900 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಬದಲಾಗದೆ, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,090 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,090 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,900 ರೂಪಾಯಿ ನಿಗದಿಯಾಗಿದೆ. ಚಿನ್ನದ ದರ ಕೊಂಚ ಏರಿಕೆ ಆಗಿದೆ. ಬೆಳ್ಳಿ ಬೆಲೆ ಕೂಡ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,700 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ಗೆ ನುಗ್ಗಿ ಚಾಕು ತೋರಿಸಿ ನಗದು- ಚಿನ್ನ ದರೋಡೆ