ಬೆಂಗಳೂರು: ಕರ್ನಾಟಕ ಸಹಿತ ಭಾರತದಾದ್ಯಂತ ಕೊರೊನಾ ಸೋಂಕು ಏರಿಕೆ ಆಗುತ್ತಿದೆ. ಈ ಮಧ್ಯೆ ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ಮುಂತಾದ ನಿಯಮಗಳನ್ನು ಹೇರಲಾಗಿದೆ. ಆದರೂ ವಿವಾಹ ಸಹಿತ ಇತರ ಶುಭ ಸಮಾರಂಭಗಳು ನಡೆಯುತ್ತಿದೆ. ಹೀಗಾಗಿ, ಆಭರಣ ಖರೀದಿಗೆ ಜನರು ತೆರಳುವುದು ಕಡಿಮೆ ಆಗಬೇಕೆಂದಿಲ್ಲ. ಅದಲ್ಲದೇ ಭಾರತದಲ್ಲಿ ಆಭರಣ ಖರೀದಿ ಕೂಡ ಒಂದು ಹೂಡಿಕೆ, ಆಸ್ತಿ ಎಂದು ಪರಿಗಣಿತ ಆಗಿರುವುದರಿಂದ ಒಡವೆ ಬಗ್ಗೆ ಜನರ ಆಸಕ್ತಿ ಕಡಿಮೆ ಆಗಬೇಕಿಲ್ಲ. ನೀವು ಆಭರಣ ಖರೀದಿಗೆ ಮನಸ್ಸು ಮಾಡಿದ್ದರೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 20, ಗುರುವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,000 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,430 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,300 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,560 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,600 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 67,300 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 67,300 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,600 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,600 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 63,200 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್
ಇದನ್ನೂ ಓದಿ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ಗೆ ನುಗ್ಗಿ ಚಾಕು ತೋರಿಸಿ ನಗದು- ಚಿನ್ನ ದರೋಡೆ