AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿ ದರ ಎಷ್ಟಿದೆ?

Gold and Silver Rate Today: ಪ್ರತಿನಿತ್ಯ ಬೆಳ್ಳಿ ಹಾಗೂ ಚಿನ್ನದ ದರಗಳು ನಗರದಿಂದ ಬದಲಾಗುತ್ತವೆ. ಹಾಗೆಯೇ ಇದು ನಗರದಿಂದ ನಗರಕ್ಕೂ ಬೆಲೆಯಲ್ಲಿ ವ್ಯತ್ಯಾಸವನ್ನು ಹೊಂದಿರುತ್ತದೆ. ಇಂದು ಅಂದರೆ ಜನವರಿ 27ರ ಗುರುವಾರ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold and Silver Price: ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿ ದರ ಎಷ್ಟಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 27, 2022 | 7:45 AM

Share

ಬೆಂಗಳೂರು: ಹೊಸವರ್ಷದ ಮೊದಲ ತಿಂಗಳಾದ ಜನವರಿ ಇನ್ನೇನು ಮುಕ್ತಾಯವಾಗಲಿದೆ. ಈ ವರ್ಷದ ಆರಂಭದಲ್ಲೇ ಆಭರಣ ಕೊಳ್ಳಬೇಕು ಎಂದುಕೊಂಡ ಹಲವರು ಇನ್ನೂ ಯಾವಾಗ ಚಿನ್ನ, ಬೆಳ್ಳಿ ಕೊಳ್ಳೋಣ ಎಂದು ಯೋಚಿಸುತ್ತಿರಬಹುದು. ಯಾವಾಗ ಚಿನ್ನದ ಬೆಲೆ ಇಳಿಕೆ ಆಗುತ್ತೆ ಎಂದು ಕಾಯುತ್ತಿರಬಹುದು. ಏನೇ ಆದರೂ ನಿತ್ಯ ಚಿನ್ನದ ದರ ಎಷ್ಟಾಗಿದೆ ಎಂದು ಗಮನಿಸುತ್ತಿರಬಹುದು. ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 27, ಗುರುವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,000 ರೂಪಾಯಿ ನಿಗದಿಯಾಗಿದೆ. ಬುಧವಾರದ ದರಕ್ಕಿಂತ ಇಂದು ಚಿನ್ನದ ದರದಲ್ಲಿ ಕೊಂಚ ಏರಿಕೆ ಆಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 68,500 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,370 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,700 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,900 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ 4,400 ರೂ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 68,500 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ, ಕೆಜಿ ಬೆಳ್ಳಿಗೆ 68,500 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,300 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ, ಕೆಜಿ ಬೆಳ್ಳಿ ಬೆಲೆ 64,200 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:

Union Budget 2022: 10 ವರ್ಷದಲ್ಲಿ ಬಜೆಟ್​ ದಿನದಂದು ಷೇರುಪೇಟೆ ಸೂಚ್ಯಂಕಗಳ ಪರ್ಫಾರ್ಮೆನ್ಸ್ ಹೇಗಿತ್ತು?

Budget 2022: ಕೇಂದ್ರ ಬಜೆಟ್ 2022ರ ದಿನಾಂಕ, ಸಮಯ ಮತ್ತು ಪ್ರಮುಖ ಮಾಹಿತಿಗಳು

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ