ಬೆಂಗಳೂರು: ಹೊಸವರ್ಷದ ಮೊದಲ ತಿಂಗಳಾದ ಜನವರಿ ಇನ್ನೇನು ಮುಕ್ತಾಯವಾಗಲಿದೆ. ಈ ವರ್ಷದ ಆರಂಭದಲ್ಲೇ ಆಭರಣ ಕೊಳ್ಳಬೇಕು ಎಂದುಕೊಂಡ ಹಲವರು ಇನ್ನೂ ಯಾವಾಗ ಚಿನ್ನ, ಬೆಳ್ಳಿ ಕೊಳ್ಳೋಣ ಎಂದು ಯೋಚಿಸುತ್ತಿರಬಹುದು. ಯಾವಾಗ ಚಿನ್ನದ ಬೆಲೆ ಇಳಿಕೆ ಆಗುತ್ತೆ ಎಂದು ಕಾಯುತ್ತಿರಬಹುದು. ಏನೇ ಆದರೂ ನಿತ್ಯ ಚಿನ್ನದ ದರ ಎಷ್ಟಾಗಿದೆ ಎಂದು ಗಮನಿಸುತ್ತಿರಬಹುದು. ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 27, ಗುರುವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,000 ರೂಪಾಯಿ ನಿಗದಿಯಾಗಿದೆ. ಬುಧವಾರದ ದರಕ್ಕಿಂತ ಇಂದು ಚಿನ್ನದ ದರದಲ್ಲಿ ಕೊಂಚ ಏರಿಕೆ ಆಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 68,500 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,370 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,700 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,900 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ 4,400 ರೂ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 68,500 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ, ಕೆಜಿ ಬೆಳ್ಳಿಗೆ 68,500 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,300 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ, ಕೆಜಿ ಬೆಳ್ಳಿ ಬೆಲೆ 64,200 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ:
Union Budget 2022: 10 ವರ್ಷದಲ್ಲಿ ಬಜೆಟ್ ದಿನದಂದು ಷೇರುಪೇಟೆ ಸೂಚ್ಯಂಕಗಳ ಪರ್ಫಾರ್ಮೆನ್ಸ್ ಹೇಗಿತ್ತು?
Budget 2022: ಕೇಂದ್ರ ಬಜೆಟ್ 2022ರ ದಿನಾಂಕ, ಸಮಯ ಮತ್ತು ಪ್ರಮುಖ ಮಾಹಿತಿಗಳು