AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಗ್ರಾಹಕರೇ ಆಭರಣ ಖರೀದಿ ಬಗ್ಗೆ ಆಲೋಚಿಸಬಹುದು ಗಮನಿಸಿ

Gold Rate Today: ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 28, ಶುಕ್ರವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold and Silver Price: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಗ್ರಾಹಕರೇ ಆಭರಣ ಖರೀದಿ ಬಗ್ಗೆ ಆಲೋಚಿಸಬಹುದು ಗಮನಿಸಿ
ಸಂಗ್ರಹ ಚಿತ್ರ
TV9 Web
| Edited By: |

Updated on:Jan 29, 2022 | 7:38 AM

Share

ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 28, ಶುಕ್ರವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 4,600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 67,700 ರೂಪಾಯಿ ದಾಖಲಾಗಿದೆ. ಸುಮಾರು 800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,400 ರೂಪಾಯಿ ನಿಗದಿಯಾಗಿದೆ. ಸುಮಾರು 6,300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,000 ರೂಪಾಯಿ ನಿಗದಿಯಾಗಿದೆ. ಸುಮಾರು 6,900 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 67,700 ರೂಪಾಯಿ ನಿಗದಿಯಾಗಿದೆ. ಸುಮಾರು 800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,600 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 67,700 ರೂಪಾಯಿ ನಿಗದಿಯಾಗಿದೆ. ಸುಮಾರು 800 ರೂಪಾಯಿಯಷ್ಟು ಇಳಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ನಿಗದಿಯಾಗಿದೆ. ಸುಮಾರು 4,000 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ಸುಮಾರು 1,900 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 63,200 ರೂಪಾಯಿ ನಿಗದಿಯಾಗಿದೆ. ಸುಮಾರು 1,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold Price Today: ಇಂದು ಚಿನ್ನದ ದರದಲ್ಲಿ ಕೊಂಚ ಇಳಿಕೆ; ಬೆಳ್ಳಿ ಬೆಲೆ ಏರಿಕೆ

Gold and Silver Rate Today: ಒಡವೆ ಖರೀದಿಸುವ ಆಸೆ ಇದ್ದರೆ ಚಿನ್ನ, ಬೆಳ್ಳಿ ದರ ಎಷ್ಟಿದೆ ನೋಡಿ

Published On - 7:26 am, Fri, 28 January 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ