Gold and Silver Price Today| ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಕಳೆದ ಮೂರು ದಿನಗಳಿಂದ ಆಭರಣದ ಬೆಲೆ ಇಳಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಜನವರಿ 29, ಶನಿವಾರ) ಕೂಡ ಚಿನ್ನದ ದರ (Gold Price) ಇಳಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,900 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಕೂಡ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 66,300 ರೂಪಾಯಿ ದಾಖಲಾಗಿದೆ. ಸುಮಾರು 1,400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,490 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,900 ರೂಪಾಯಿ ನಿಗದಿಯಾಗಿದೆ. ಸುಮಾರು 2,500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,630 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,300 ರೂಪಾಯಿ ನಿಗದಿಯಾಗಿದೆ. ಸುಮಾರು 2,700 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ. ಸುಮಾರು 1,400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,900 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ. ಸುಮಾರು 1,400 ರೂಪಾಯಿಯಷ್ಟು ಇಳಿಕೆ ಆಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ಸುಮಾರು 3,500 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ಸುಮಾರು 3,900 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 62,000 ರೂಪಾಯಿ ನಿಗದಿಯಾಗಿದೆ. ಸುಮಾರು 1,200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold and Silver Price: ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿ ದರ ಎಷ್ಟಿದೆ?
Gold and Silver Rate Today: ಒಡವೆ ಖರೀದಿಸುವ ಆಸೆ ಇದ್ದರೆ ಚಿನ್ನ, ಬೆಳ್ಳಿ ದರ ಎಷ್ಟಿದೆ ನೋಡಿ
Published On - 7:31 am, Sat, 29 January 22