Gold and Silver Price Today| ಬೆಂಗಳೂರು: ಮದುವೆ ಅಥವಾ ಇನ್ನಿತರ ಸಮಾರಂಭಗಳು ಎದುರಿಗಿರುವಾಗ ಚಿನ್ನ ಖರೀದಿಸುವುದು ಒಂದು ರೀತಿಯ ವಾಡಿಕೆಯಾಗಿ ಪರಿಣಮಿಸಿದೆ. ಸಮಾರಂಭಗಳ ನೆಪದಲ್ಲಿ ಒಂದಷ್ಟು ಚಿನ್ನದ ಒಡವೆಗಳನ್ನು ಕೊಂಡಕೊಂಡರೆ ಮತ್ತಷ್ಟು ಬೆಳ್ಳಿ ಒಡವೆಗಳನ್ನು ಖರೀದಿಸುವುದು ಇದೆ. ಚಿನ್ನ, ಬೆಳ್ಳಿ ಎಂದರೆ ಎಲ್ಲರಿಗೂ ಪ್ರೀತಿ ಅದರಲ್ಲೂ ಮಹಿಳೆಯರಿಗೆ(Women) ಆಭರಣದ ವಿಚಾರಕ್ಕೆ ಬಂದಾಗ ಕೊಂಚ ಜಾಸ್ತಿಯೇ ವ್ಯಾಮೋಹ ಇರುತ್ತದೆ. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಕಳೆದ ಮೂರು ದಿನಗಳಿಂದ ಆಭರಣದ ಬೆಲೆ ಇಳಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಜನವರಿ 30, ಭಾನುವಾರ) ಕೂಡ ಚಿನ್ನದ ದರ (Gold Price) ಇಳಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಇಳಿಕೆಯತ್ತ ಸಾಗಿದೆ. ಇಂದು ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಕೂಡ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,500 ರೂಪಾಯಿ ದಾಖಲಾಗಿದೆ. ಸುಮಾರು 800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,330 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,300 ರೂಪಾಯಿ ನಿಗದಿಯಾಗಿದೆ. ಸುಮಾರು 1,600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,500 ರೂಪಾಯಿ ನಿಗದಿಯಾಗಿದೆ. ಸುಮಾರು 1,800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 66,500 ರೂಪಾಯಿ ನಿಗದಿಯಾಗಿದೆ. ಸುಮಾರು 800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ. ಸುಮಾರು 800 ರೂಪಾಯಿಯಷ್ಟು ಇಳಿಕೆ ಆಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ಸುಮಾರು 1,500 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,000 ರೂಪಾಯಿ ನಿಗದಿಯಾಗಿದೆ. ಸುಮಾರು 2,500 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 61,100 ರೂಪಾಯಿ ನಿಗದಿಯಾಗಿದೆ. ಸುಮಾರು 900 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಇದನ್ನೂ ಓದಿ:
Published On - 7:28 am, Sun, 30 January 22