AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 28th April: ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 130 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Gold Prices April 28th 2024, Gold Rate down by Rs 130 per gm in 10 days Bullion Market 2024 April 28th: ಚಿನ್ನದ ಬೆಲೆ ಈ ವಾರ ಗ್ರಾಮ್​ಗೆ 100 ರೂಗೂ ಹೆಚ್ಚು ಇಳಿದಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 2 ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,710 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 84.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,650 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,360 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 28th April: ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 130 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Apr 28, 2024 | 5:00 AM

Share

ಬೆಂಗಳೂರು, ಏಪ್ರಿಲ್ 28: ಹಿಂದಿನ ಮೂರ್ನಾಲ್ಕು ವಾರ ಎಗ್ಗಿಲ್ಲದೆ ಏರಿದ್ದ ಚಿನ್ನ ಮತ್ತು ಬೆಳ್ಳಿ (Gold and silver Rates) ಬೆಲೆ ಈ ವಾರ ಸ್ವಲ್ಪಮಟ್ಟಿಗೆ ಇಳಿಕೆ ಕಂಡಿವೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಒಮ್ಮೆ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಗ್ರಾಮ್​​ಗೆ ಎರಡು ರೂನಷ್ಟು ಬೆಲೆ ತಗ್ಗಿದೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 130 ರೂನಷ್ಟು ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,360 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 836 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,650 ರೂ
  • ಚೆನ್ನೈ: 67,550 ರೂ
  • ಮುಂಬೈ: 66,650 ರೂ
  • ದೆಹಲಿ: 66,800 ರೂ
  • ಕೋಲ್ಕತಾ: 66,650 ರೂ
  • ಕೇರಳ: 66,650 ರೂ
  • ಅಹ್ಮದಾಬಾದ್: 66,700 ರೂ
  • ಜೈಪುರ್: 66,800 ರೂ
  • ಲಕ್ನೋ: 66,800 ರೂ
  • ಭುವನೇಶ್ವರ್: 66,650 ರೂ

ಇದನ್ನೂ ಓದಿ: ಕೇರಳದ ವಿಳಿಂಜಮ್ ಪೋರ್ಟ್; ಭಾರತದ ಮೊದಲ ಟ್ರಾನ್ಸ್​ಶಿಪ್ಮೆಂಟ್ ಬಂದರು ಕಾರ್ಯಾಚರಣೆಗೆ ಒಪ್ಪಿಗೆ ಪಡೆದ ಅದಾನಿ ಗ್ರೂಪ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,520 ರಿಂಗಿಟ್ (61,511 ರುಪಾಯಿ)
  • ದುಬೈ: 2,617.50 ಡಿರಾಮ್ (59,377 ರುಪಾಯಿ)
  • ಅಮೆರಿಕ: 710 ಡಾಲರ್ (59,158 ರುಪಾಯಿ)
  • ಸಿಂಗಾಪುರ: 982 ಸಿಂಗಾಪುರ್ ಡಾಲರ್ (60,165 ರುಪಾಯಿ)
  • ಕತಾರ್: 2,670 ಕತಾರಿ ರಿಯಾಲ್ (61,009 ರೂ)
  • ಸೌದಿ ಅರೇಬಿಯಾ: 2,690 ಸೌದಿ ರಿಯಾಲ್ (59,759 ರುಪಾಯಿ)
  • ಓಮನ್: 282.50 ಒಮಾನಿ ರಿಯಾಲ್ (61,138 ರುಪಾಯಿ)
  • ಕುವೇತ್: 223 ಕುವೇತಿ ದಿನಾರ್ (60,373 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,360 ರೂ
  • ಚೆನ್ನೈ: 8,800 ರೂ
  • ಮುಂಬೈ: 8,450 ರೂ
  • ದೆಹಲಿ: 8,450 ರೂ
  • ಕೋಲ್ಕತಾ: 8,450 ರೂ
  • ಕೇರಳ: 8,800 ರೂ
  • ಅಹ್ಮದಾಬಾದ್: 8,450 ರೂ
  • ಜೈಪುರ್: 8,450 ರೂ
  • ಲಕ್ನೋ: 8,450 ರೂ
  • ಭುವನೇಶ್ವರ್: 8,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ