ಬೆಂಗಳೂರು, ಏಪ್ರಿಲ್ 28: ಹಿಂದಿನ ಮೂರ್ನಾಲ್ಕು ವಾರ ಎಗ್ಗಿಲ್ಲದೆ ಏರಿದ್ದ ಚಿನ್ನ ಮತ್ತು ಬೆಳ್ಳಿ (Gold and silver Rates) ಬೆಲೆ ಈ ವಾರ ಸ್ವಲ್ಪಮಟ್ಟಿಗೆ ಇಳಿಕೆ ಕಂಡಿವೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಒಮ್ಮೆ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಗ್ರಾಮ್ಗೆ ಎರಡು ರೂನಷ್ಟು ಬೆಲೆ ತಗ್ಗಿದೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 130 ರೂನಷ್ಟು ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,360 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಕೇರಳದ ವಿಳಿಂಜಮ್ ಪೋರ್ಟ್; ಭಾರತದ ಮೊದಲ ಟ್ರಾನ್ಸ್ಶಿಪ್ಮೆಂಟ್ ಬಂದರು ಕಾರ್ಯಾಚರಣೆಗೆ ಒಪ್ಪಿಗೆ ಪಡೆದ ಅದಾನಿ ಗ್ರೂಪ್
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ