AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 30th April: ಗ್ರಾಮ್​ಗೆ 300 ರೂನಷ್ಟು ಬೆಲೆ ಇಳಿಕೆ ಕಂಡ ಚಿನ್ನ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 April 30th: ಕಳೆದ ವಾರದಂತೆ ಈ ವಾರವೂ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿಯುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,600 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 84 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,550 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 30th April: ಗ್ರಾಮ್​ಗೆ 300 ರೂನಷ್ಟು ಬೆಲೆ ಇಳಿಕೆ ಕಂಡ ಚಿನ್ನ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Apr 30, 2024 | 5:03 AM

Share

ಬೆಂಗಳೂರು, ಏಪ್ರಿಲ್ 30: ಕಳೆದ ಒಂದು ವಾರದಿಂದ ಆಗುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಏರಿಳಿತ ಈ ವಾರ ಮುಂದುವರಿಯುತ್ತಿರುವಂತಿದೆ. ಇಂದು ಮಂಗಳವಾರ ಚಿನ್ನದ ಬೆಲೆ ಕಡಿಮೆ ಆಗಿದೆ. ಗ್ರಾಮ್​ಗೆ 30 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಚಿನ್ನದ ಬೆಲೆ ಹೆಚ್ಚಿನ ದೇಶಗಳಲ್ಲಿ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,550 ರೂ
  • ಚೆನ್ನೈ: 67,400 ರೂ
  • ಮುಂಬೈ: 66,550 ರೂ
  • ದೆಹಲಿ: 66,700 ರೂ
  • ಕೋಲ್ಕತಾ: 66,550 ರೂ
  • ಕೇರಳ: 66,550 ರೂ
  • ಅಹ್ಮದಾಬಾದ್: 66,600 ರೂ
  • ಜೈಪುರ್: 66,700 ರೂ
  • ಲಕ್ನೋ: 66,700 ರೂ
  • ಭುವನೇಶ್ವರ್: 66,550 ರೂ

ಇದನ್ನೂ ಓದಿ: ಶಾಲಾ ಪರೀಕ್ಷೆಯಲ್ಲಿ ಫೇಲ್ ಆಗಿ ಊರು ಬಿಟ್ಟು ಹೋದ ಉಡುಪಿ ಹುಡುಗ ಇವತ್ತು ಉತ್ತರ ಭಾರತದ ದೋಸೆ ಕಿಂಗ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,520 ರಿಂಗಿಟ್ (61,640 ರುಪಾಯಿ)
  • ದುಬೈ: 2,622.50 ಡಿರಾಮ್ (59,604 ರುಪಾಯಿ)
  • ಅಮೆರಿಕ: 715 ಡಾಲರ್ (59,688 ರುಪಾಯಿ)
  • ಸಿಂಗಾಪುರ: 986 ಸಿಂಗಾಪುರ್ ಡಾಲರ್ (60,542 ರುಪಾಯಿ)
  • ಕತಾರ್: 2,670 ಕತಾರಿ ರಿಯಾಲ್ (61,073 ರೂ)
  • ಸೌದಿ ಅರೇಬಿಯಾ: 2,665 ಸೌದಿ ರಿಯಾಲ್ (61,018 ರುಪಾಯಿ)
  • ಓಮನ್: 282 ಒಮಾನಿ ರಿಯಾಲ್ (61,145 ರುಪಾಯಿ)
  • ಕುವೇತ್: 223 ಕುವೇತಿ ದಿನಾರ್ (60,486 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,350 ರೂ
  • ಚೆನ್ನೈ: 8,750 ರೂ
  • ಮುಂಬೈ: 8,400 ರೂ
  • ದೆಹಲಿ: 8,400 ರೂ
  • ಕೋಲ್ಕತಾ: 8,400 ರೂ
  • ಕೇರಳ: 8,750 ರೂ
  • ಅಹ್ಮದಾಬಾದ್: 8,400 ರೂ
  • ಜೈಪುರ್: 8,400 ರೂ
  • ಲಕ್ನೋ: 8,400 ರೂ
  • ಭುವನೇಶ್ವರ್: 8,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ