AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರಿನಲ್ಲಿ 74,200ಕ್ಕೇರಿದ ಬೆಳ್ಳಿ ಬೆಲೆ; ಚಿನ್ನದ ದರವೂ ಹೆಚ್ಚಳ

Silver Price Today: ಬೆಳ್ಳಿಯ ಬೆಲೆ ಇಂದು ಒಂದೇ ದಿನದಲ್ಲಿ 1,500 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 49,000 ರೂ. ಇದ್ದುದು 49,350 ರೂ. ಆಗಿದೆ.

Gold Price Today: ಬೆಂಗಳೂರಿನಲ್ಲಿ 74,200ಕ್ಕೇರಿದ ಬೆಳ್ಳಿ ಬೆಲೆ; ಚಿನ್ನದ ದರವೂ ಹೆಚ್ಚಳ
ಚಿನ್ನದ ಬೆಲೆ
TV9 Web
| Edited By: |

Updated on: Apr 14, 2022 | 6:02 AM

Share

ಬೆಂಗಳೂರು: ಕಳೆದ ವಾರ ಚಿನ್ನದ ಬೆಲೆ ಹೆಚ್ಚೇನೂ ಏರಿಳಿತಗಳನ್ನು ಕಂಡಿರಲಿಲ್ಲ. ಆದರೆ, ನಿನ್ನೆ ಚಿನ್ನದ ಬೆಲೆ 430 ರೂ. ಏರಿಕೆ ಕಂಡಿತ್ತು. ಇಂದು ಕೂಡ ಚಿನ್ನದ ದರ (Gold Rate) ಹೆಚ್ಚಳವಾಗಿದ್ದು, 390 ರೂ. ಏರಿಕೆಯಾಗಿದೆ. ಈ ಮೂಲಕ ಚಿನ್ನ ಖರೀದಿಸುವವರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಆದರೆ, ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 1,500 ರೂ. ಏರಿಕೆಯಾಗಿದೆ. ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 49,000 ರೂ. ಇದ್ದುದು 49,350 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 53,450 ರೂ. ಇದ್ದುದು 53,840 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,960 ರೂ. ಮುಂಬೈ- 49,350 ರೂ, ದೆಹಲಿ- 49,350 ರೂ, ಕೊಲ್ಕತ್ತಾ- 49,350 ರೂ, ಬೆಂಗಳೂರು- 49,350 ರೂ, ಹೈದರಾಬಾದ್- 49,350 ರೂ, ಕೇರಳ- 49,350 ರೂ, ಪುಣೆ- 49,400 ರೂ, ಮಂಗಳೂರು- 49,350 ರೂ, ಮೈಸೂರು- 49,350 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 54,500 ರೂ, ಮುಂಬೈ- 53,840 ರೂ, ದೆಹಲಿ- 53,840 ರೂ, ಕೊಲ್ಕತ್ತಾ- 53,840 ರೂ, ಬೆಂಗಳೂರು- 53,840 ರೂ, ಹೈದರಾಬಾದ್- 53,840 ರೂ, ಕೇರಳ- 53,840 ರೂ, ಪುಣೆ- 53,890 ರೂ, ಮಂಗಳೂರು- 53,840 ರೂ, ಮೈಸೂರು- 53,840 ರೂ. ಆಗಿದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಆದರೆ, ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ (Silver Price) ಭಾರೀ ಏರಿಕೆಯಾಗಿದೆ.

ಇಂದಿನ ಬೆಳ್ಳಿಯ ದರ: ನಿನ್ನೆ 1 ಕೆಜಿ ಬೆಳ್ಳಿ ಬೆಲೆ ಕೇವಲ 100 ರೂ. ಏರಿಕೆಯಾಗಿತ್ತು. ಆದರೆ, ಇಂದು 1,500 ರೂ. ಏರಿಕೆ ಕಂಡಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 67,800 ರೂ. ಇದ್ದುದು ಇಂದು 69,300 ರೂ.ಗೆ ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 74,200 ರೂ, ಮೈಸೂರು- 74,200 ರೂ., ಮಂಗಳೂರು- 74,200 ರೂ., ಮುಂಬೈ- 69,300 ರೂ, ಚೆನ್ನೈ- 74,200 ರೂ, ದೆಹಲಿ- 69,300 ರೂ, ಹೈದರಾಬಾದ್- 74,200 ರೂ, ಕೊಲ್ಕತ್ತಾ- 69,300 ರೂ. ಆಗಿದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವೆಡೆ ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಇಂದಿನ ಬೆಳ್ಳಿ ದರ ಹೀಗಿದೆ

Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಭಾರೀ ಕುಸಿತ; ಇಂದಿನ ಬೆಳ್ಳಿ ದರ ಹೀಗಿದೆ

Follow Us
TV9 Web
TV9 Web

TV9 Kannada

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!