AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!

Gold Price Today: ಇಂದು ಚಿನ್ನದ ದರ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಸ್ಥಿರವಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಹಾಗಾಗಿ ನೀವು ಕೂಡಿಟ್ಟ ಹಣದಲ್ಲಿ ಸರಿ ಹೊಂದುವುದಾದರೆ ಚಿನ್ನಾಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 14, 2021 | 7:47 AM

Share

Gold Silver Price Today | ಬೆಂಗಳೂರು: ಚಿನ್ನಾಭರಣ ಖರೀದಿಸಬೇಕು ಎಂಬ ಆಸೆ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತೆ. ಅದೇ ರೀತಿ ಭಾರತದಲ್ಲಿ ಚಿನ್ನಕ್ಕೆ (Gold Price) ಬೇಡಿಕೆಯೂ ಹೆಚ್ಚಿದೆ. ದುಬಾರಿ ಚಿನ್ನವನ್ನು ಖರೀದಿಸುವಾಗ ದರ ಅಲ್ಪವಾದರೂ ಇಳಿಕೆಯತ್ತ ಸಾಗಿರಬೇಕು ಎಂಬ ನಿರೀಕ್ಷೆ ಜತೆಗೆ ಆಸೆ ತಪ್ಪಲ್ಲ. ಇಂದು ( ಸೆಪ್ಟೆಂಬರ್​ 14, ಮಂಗಳವಾರ) ಚಿನ್ನದ ದರ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಸ್ಥಿರವಾಗಿದೆ. ಬೆಳ್ಳಿ ದರದಲ್ಲಿ (Silver Price) ಕೊಂಚ ಇಳಿಕೆ ಕಂಡು ಬಂದಿದೆ. ಹಾಗಾಗಿ ನೀವು ಕೂಡಿಟ್ಟ ಹಣದಲ್ಲಿ ಸರಿ ಹೊಂದುವುದಾದರೆ ಚಿನ್ನಾಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಇಂದು ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,39,900 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,900 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿತಗಳಿಲ್ಲ. ಹಾಗೆಯೇ ಬೆಳ್ಳಿ ದರದಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ ಬೆಲೆ 63,400 ರೂಪಾಯಿ ಇದೆ. ಸುಮಾರು 4,600 ರೂಪಾಯಿಯಷ್ಟು ಇಳಿಕೆ ಆಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,390 ಸಾವಿರ ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 48,390 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಕಂಡು ಬಂದಿದ್ದು, 67,800 ರೂಪಾಯಿ ನಿಗದಿಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,340 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,03,400 ರೂಪಾಯಿ ಇದೆ. ಕೆಜಿ ಬೆಳ್ಳಿ ಬೆಲೆಯಲ್ಲಿ ಸುಮಾರು 800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದ್ದು, 63,400 ರೂಪಾಯಿ ನಿಗದಿಯಾಗಿದೆ.

ಬೆಂಗಳೂರು, ದೆಹಲಿ, ಚೆನ್ನೈ ಸೇರಿದಂತೆಯೇ ಮುಂಬೈ, ಜೈಪುರ, ಕೇರಳ ಹೀಗೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಸ್ಥಿರವಾಗಿಯೇ ಇದೆ. ಕಳೆದ ಎರಡು ದಿನಗಳಿಂದ ಚಿನ್ನಾಭರಣ ದರ ಕೊಂಚ ಇಳಿಕೆ ಕಂಡಿತ್ತು. ಅದೇ ರೀತಿ ಕಳೆದ ಎರಡು ದಿನಗಳಲ್ಲಿ ಬೆಳ್ಳಿ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಆಗಿತ್ತು. ಆದರೆ ಇಂದು ಬೆಳ್ಳಿ ದರ ಅಲ್ಪ ಪ್ರಮಾಣದಲ್ಲಿ ಇಳಿಕೆ ಆಗಿದೆ.

ಇದನ್ನೂ ಓದಿ:

Gold Rate Today: ಬೆಂಗಳೂರು ಸೇರಿದಂತೆ ಹಲವೆಡೆ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಏರಿಕೆ!

Gold Rate Today: ಚಿನ್ನದ ದರ ಕೊಂಚ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

(Gold price today unchanged 0n 2021 September 14 check silver price in bangalore delhi mumbai and minor city)

Published On - 7:38 am, Tue, 14 September 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ