AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಸಹ ಸ್ಥಿರತೆಯಲ್ಲಿದೆ ಚಿನ್ನದ ಬೆಲೆ, ಇಳಿಕೆಯ ಹಾದಿ ಹಿಡಿದ ಬೆಳ್ಳಿ ದರ; ನಿಮ್ಮೂರಿನಲ್ಲಿ ಎಷ್ಟಿದೆ ಆಭರಣ ದರ ಪರಿಶೀಲಿಸಿ

Gold Price Today: ಇಂದು ಸಹ ಚಿನ್ನದ ದರ ಸ್ಥಿರವಾಗಿಯೇ ಇದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಆಭರಣ ಕೊಳ್ಳಬೇಕು ಅಂದುಕೊಂಡಿದ್ದರೆ ಸಂಪೂರ್ಣ ದರ ವಿವರ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಇಂದು ಸಹ ಸ್ಥಿರತೆಯಲ್ಲಿದೆ ಚಿನ್ನದ ಬೆಲೆ, ಇಳಿಕೆಯ ಹಾದಿ ಹಿಡಿದ ಬೆಳ್ಳಿ ದರ; ನಿಮ್ಮೂರಿನಲ್ಲಿ ಎಷ್ಟಿದೆ ಆಭರಣ ದರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 15, 2021 | 7:57 AM

Share

Gold Silver Price Today | ಬೆಂಗಳೂರು: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನಿನ್ನೆ ಚಿನ್ನದ ದರ ಸ್ಥಿರವಾಗಿತ್ತು. ಅದೇ ರೀತಿ ಬೆಳ್ಳಿ ದರದಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿತ್ತು. ಹಾಗೆಯೇ ಇಂದು ಸಹ ( ಸೆಪ್ಟೆಂಬರ್​ 15, ಬುಧವಾರ) ಚಿನ್ನದ ದರ (Gold Price) ಸ್ಥಿರವಾಗಿಯೇ ಇದೆ. ಬೆಳ್ಳಿ ದರದಲ್ಲಿ (Silver Price) ಕೊಂಚ ಇಳಿಕೆ ಕಂಡು ಬಂದಿದೆ. ಆಭರಣ ಕೊಳ್ಳಬೇಕು ಅಂದುಕೊಂಡಿದ್ದರೆ ಸಂಪೂರ್ಣ ದರ ವಿವರ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,990 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,39,900 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,900 ರೂಪಾಯಿ ಇದೆ. ಅದೇ ರೀತಿ ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಆಗಿದ್ದು, 200 ರೂಪಾಯಿ ಇಳಿಕೆ ಕಂಡ ಕೆಜಿ ಬೆಳ್ಳಿಗೆ 63,200 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನದ ದರ ಕೊಂಚ ಇಳಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,350 ರೂಪಾಯಿ ಇಳಿಕೆ ಆಗಿದೆ. 100 ಗ್ರಾಂ ಚಿನ್ನದ ದರ 4,43,500 ರೂಪಾಯಿಗೆ ಇಳಿಕೆ ಆಗಿದೆ. ಸುಮಾರು 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,380 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,83,800 ರೂಪಾಯಿ ನಿದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ 400 ರೂಪಾಯಿ ಇಳಿಕೆ ಕಂಡ ಕೆಜಿ ಬೆಳ್ಳಿಗೆ 67,400 ರೂಪಾಯಿ ನಿಗದಿ ಆಗಿದೆ.

ಹೈದರಾಬಾದ್ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,39,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಮ ಚಿನ್ನಕ್ಕೆ 47,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,900 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ದರ ಕೊಂಚ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 67,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಕೆಲವೆಡೆ ಚಿನ್ನದ ದರ ಸ್ಥಿರವಾಗಿದ್ದರೆ, ಕೆಲವೆಡೆ ಚಿನ್ನದ ದರ ಕೊಂಚ ಇಳಿಕೆ ಕಂಡಿದೆ. ಬೆಳ್ಳಿ ದರದಲ್ಲಿ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಳಿಕೆ ಆಗಿದೆ. ಹಾಗಾಗಿ ನೀವು ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಯೋಚಿಸಿ.

ಇದನ್ನೂ ಓದಿ:

Gold Rate Today: ಚಿನ್ನದ ದರ ಕೊಂಚ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Rate Today: ಇಳಿಕೆಯ ಹಾದಿ ಹಿಡಿದ ಚಿನ್ನದ ದರ; ಆಭರಣ ಖರೀದಿಸಲು ಸುಸಮಯ

(Gold price today unchanged 0n 2021 September 15 check silver price in bangalore delhi mumbai and minor city)

Published On - 7:45 am, Wed, 15 September 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್