Gold Price Today: ಕೆಲವೆಡೆ ಸ್ಥಿರತೆ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ!

Gold Price Today: ಇಂದು ಕೆಲವೆಡೆ ಸ್ಥಿರತೆ ಕಾಯ್ದುಕೊಂಡರೆ, ಇನ್ನು ಕೆಲವೆಡೆ ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿ ಇಂದು ಏರಿಕೆ ಕಂಡು ಬಂದಿದೆ. ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ? ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

Gold Price Today: ಕೆಲವೆಡೆ ಸ್ಥಿರತೆ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Sep 30, 2021 | 7:26 AM

Gold Silver Price Today | ಬೆಂಗಳೂರು: ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದರ ಇಳಿಕೆ ಕಂಡಿತ್ತು. ಇಂದು (ಸೆಪ್ಟೆಂಬರ್​ 30, ಗುರುವಾರ) ಕೆಲವೆಡೆ ಸ್ಥಿರತೆ ಕಾಯ್ದುಕೊಂಡರೆ, ಇನ್ನು ಕೆಲವೆಡೆ ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿ ಇಂದು ಏರಿಕೆ ಕಂಡು ಬಂದಿದೆ. ಪ್ರಮುಖ ನಗರಗಳಲ್ಲಿ ಇಂದು ಚಿನ್ನ (Gold Price), ಬೆಳ್ಳಿ ದರ (Silver price) ಎಷ್ಟಿದೆ? ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಲು ಸರಿ ಹೊಂದುವುದಾದರೆ ದರ ವಿವರ ಪರಿಶೀಲಿಸಿ, ಈ ಕುರಿತಾಗಿ ಯೋಚಿಸಿ. 

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,200 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,32,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,130 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ದರದಲ್ಲಿ ಇಂದು ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 60,450 ರೂಪಾಯಿ ನಿಗದಿಯಾಗಿದೆ. ಸುಮಾರು 350 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,35,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,460 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,74,600 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 64,800 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಸುಮಾರು 600 ರೂಪಾಯಿಯಷ್ಟು ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿಯಷ್ಟು ಏರಿಕೆಯಾಗಿದೆ. ಮುಂಬೈನಲ್ಲಿ ಕೆಜಿ ಬೆಳ್ಳಿಗೆ 60,450 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 350 ರೂಪಾಯಿ ಏರಿಕೆ ಕಂಡು ಬಂದಿದೆ.

ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ ಇಳಿಕೆ ಕಂಡಿತ್ತು. ಇಂದು ಸರಿಸುಮಾರು ಎಲ್ಲೆಡೆ ಸ್ಥಿರವಾಗಿದ್ದರೆ ಕೆಲವೆಡೆ ಇಳಿಕೆ ಆಗಿದೆ. ಇನ್ನು ಕೆಲವೆಡೆ ಕೊಂಚ ಪ್ರಮಾಣದಲ್ಲಿ ಏರಿಕೆಯೂ ಕಂಡು ಬಂದಿದೆ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣಗಳ ಬೆಲೆ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಹಾಗಾಗಿ ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಂತೆ ಯೋಚಿಸಬಹುದು. ಇದನ್ನೂ ಓದಿ:

Gold Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್! ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?

Gold Demand: 6 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದ ಚಿನ್ನದ ದರ; ಇಲ್ಲಿವೆ ಕಾರಣಗಳು

Published On - 7:18 am, Thu, 30 September 21