Gold Price Today: ಇಂದು ಸಹ ಸ್ಥಿರತೆಯಲ್ಲಿದೆ ಚಿನ್ನದ ದರ; ಬೆಳ್ಳಿ ಬೆಲೆಯಲ್ಲಿಯೂ ಯಾವುದೇ ಬದಲಾವಣೆಗಳಿಲ್ಲ

Gold Price Today: ಕಳೆದೆರಡು ದಿನಗಳಿಂದ ಬೆಳ್ಳಿ ದರದಲ್ಲಿ ಗಣನೀಯವಾಗಿ ಇಳಿಕೆ ಕಂಡು ಬಂದಿತ್ತು. ಇಂದು ಬೆಳ್ಳಿ ದರದಲ್ಲಿಯೂ ಸಹ ಯಾವುದೇ ಬದಲಾವಣೆ ಇಲ್ಲದೇ ಸ್ಥಿರವಾಗಿದೆ. ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸುವುದಾದರೆ ಯೋಚಿಸಿ. ಸಂಪೂರ್ಣ ದರ ವಿವರ ಮಾಹಿತಿ ಈ ಕೆಳಗಿನಂತಿದೆ.

Gold Price Today: ಇಂದು ಸಹ ಸ್ಥಿರತೆಯಲ್ಲಿದೆ ಚಿನ್ನದ ದರ; ಬೆಳ್ಳಿ ಬೆಲೆಯಲ್ಲಿಯೂ ಯಾವುದೇ ಬದಲಾವಣೆಗಳಿಲ್ಲ
ಸಾಂದರ್ಭಿಕ ಚಿತ್ರ
TV9kannada Web Team

| Edited By: shruti hegde

Sep 20, 2021 | 12:38 PM

Gold Silver Price Today | ಬೆಂಗಳೂರು: ಕಳೆದ ಹಲವು ದಿನಗಳಿಂದ ಚಿನ್ನದ ದರ ಇಳಿಕೆಯ ಹಾದಿ ಹಿಡಿದಿತ್ತು. ಬಳಿಕ ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಚಿನ್ನದ ದರ ಸ್ಥಿರತೆ ಕಾಯ್ದುಕೊಂಡಿತ್ತು. ಅದೇ ರೀತಿ ಇಂದು ಸಹ ( ಸೆಪ್ಟೆಂಬರ್​ 20, ಸೋಮವಾರ) ಚಿನ್ನದ ದರ (Gold Price) ಯಥಾಸ್ಥಿತಿಯಲ್ಲಿಯೇ ಇದೆ. ಪ್ರಮುಖ ನಗರಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದೆರಡು ದಿನಗಳಿಂದ ಬೆಳ್ಳಿ ದರದಲ್ಲಿ (Silver Price) ಗಣನೀಯವಾಗಿ ಇಳಿಕೆ ಕಂಡು ಬಂದಿತ್ತು. ಇಂದು ಬೆಳ್ಳಿ ದರದಲ್ಲಿಯೂ ಸಹ ಯಾವುದೇ ಬದಲಾವಣೆ ಇಲ್ಲದೇ ಸ್ಥಿರವಾಗಿದೆ. ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸುವುದಾದರೆ ಯೋಚಿಸಿ. ಸಂಪೂರ್ಣ ದರ ವಿವರ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,34,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,500 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಬೆಳ್ಳಿ ದರವೂ ಸಹ ಇಂದು ಇಳಿಕೆ ಆಗಿಲ್ಲ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂದು ಸ್ಥಿರವಾಗಿಯೇ ಇದೆ. ಬೆಂಗಳೂರಿನಲ್ಲಿ ಕೆಜಿ ಬೆಳ್ಳಿಗೆ 60,000 ರೂಪಾಯಿ ಇದೆ.

ಶ್ರೀ ಸಾಯಿ ಗೋಲ್ಡ್ ಪ್ಯಾಲೆಸ್​ನಲ್ಲಿ ಇಂದು 22 ಕ್ಯಾರೆಟ್ ಚಿನ್ನಕ್ಕೆ 4,319 ರೂಪಾಯಿ ಹಾಗೂ 24 ಕ್ಯಾರೆಟ್​ ಚಿನ್ನಕ್ಕೆ 4669 ರೂಪಾಯಿ ಇದೆ. ಚಿನ್ನದ ದರವನ್ನು ಗಮನಿಸಿದಾಗ MCX (ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್) ನಲ್ಲಿ ಕಳೆದ 6 ತಿಂಗಳಿಗೆ ಹೋಲಿಸಿದರೆ ಚಿನ್ನದ ದರ ಕನಿಷ್ಠ ಮಟ್ಟಕ್ಕೆ ತಲುಪಿದೆ ಎಂದು ತಜ್ಞರು ಮಾಹಿತಿ ಹಂಚಿಕೊಂಡಿದ್ದಾರೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿನ ಬದಲಾವಣೆ ಹಳದಿ ಲೋಹದ ಬೆಲೆಯ ಮೇಲೆ ಪರಿಣಾಮ ಬೀರುತ್ತದೆ. ಅದಾಗ್ಯೂ, ಕಚ್ಚಾ ತೈಲ ಬೆಲೆ ಏರಿಕೆಯು ಜಾಗತಿಕ ಹಣ ದುಬ್ಬರ ಏರಿಕೆಗೆ ಕಾರಣವಾಗುವುದರಿಂದ ಯುಎಸ್ ಡಾಲರ್ ಪ್ರಬಲ ವೇಗವು ಹೆಚ್ಚು ಕಾಲ ಉಳಿಯುವುದಿಲ್ಲ. ಇದು ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ದಿ ಮಿಂಟ್ ತಮ್ಮ ವರದಿಯಲ್ಲಿ ತಜ್ಞರ ಹೇಳಿಕೆಯನ್ನು ಈ ರೀತಿ ಉಲ್ಲೇಖಿಸಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,710 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,37,100 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,76,900 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತಗಳಿಲ್ಲ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಬದಲಾವಣೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 64,200 ರೂಪಾಯಿ ನಿದಿಯಾಗಿದೆ.

ಇನ್ನು, ಹೈದರಾಬಾದ್ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,34,000 ರೂಪಾಯಿ ನಿಗದಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,500 ರೂಪಾಯಿ ನಿಗದಿ ಆಗಿದೆ. ಬೆಳ್ಳಿ ದರದಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. 1,700 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿಗೆ 64,200 ರೂಪಾಯಿ ನಿಗದಿ ಆಗಿದೆ.

ಇಂದು ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನದ ದರ ಇಳಿಕೆ ಕಂಡಿದೆ. ಅದೇ ರೀತಿ ಕೆಲವೆಡೆ ಬೆಳ್ಳಿ ದರದಲ್ಲಿಯೂ ಬದಲಾವಣೆಗಳಿಲ್ಲದೇ ಸ್ಥಿರವಾಗಿದ್ದರೆ ಇನ್ನು ಕೆಲವೆಡೆ ಕೊಂಚ ಇಳಿಕೆ ಕಂಡಿದೆ.

ಇದನ್ನೂ ಓದಿ:

Gold Price Today: ಆಭರಣ ಖರೀದಿಸುವ ಯೋಚನೆಯಿದೆಯೇ? ನಿನ್ನೆ ದರ ಇಳಿಕೆಯ ಬಳಿಕ ಇಂದು ಸ್ಥಿರತೆಯಲ್ಲಿದೆ ಚಿನ್ನದ ದರ

Gold Price Today: ಇಂದು ಸಹ ಸ್ಥಿರತೆಯಲ್ಲಿದೆ ಚಿನ್ನದ ಬೆಲೆ, ಇಳಿಕೆಯ ಹಾದಿ ಹಿಡಿದ ಬೆಳ್ಳಿ ದರ; ನಿಮ್ಮೂರಿನಲ್ಲಿ ಎಷ್ಟಿದೆ ಆಭರಣ ದರ ಪರಿಶೀಲಿಸಿ

(Gold price unchanged today on 2021 September 20 check silver price in Bangalore Delhi Mumbai and minor city)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada