AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆ ಸಾರ್ವಕಾಲಿಕ ದಾಖಲೆ; ಚಿನ್ನದ ಬೆಲೆ ಅಲ್ಪ ಹೆಚ್ಚಳ

Bullion Market 2025 December 10th: ಚಿನ್ನದ ಬೆಲೆ ಇಂದು ಬುಧವಾರ ಅಲ್ಪ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಬರೋಬ್ಬರಿ 9 ರೂಗಳಷ್ಟು ಹೆಚ್ಚಳ ಆಗಿದೆ. ಆಭರಣ ಚಿನ್ನದ ಬೆಲೆ 11,925 ರೂನಿಂದ 11,945 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 13,031 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 190 ರೂನಿಂದ 199 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 207 ರೂ ಆಗಿದೆ.

Gold Rate Today Bangalore: ಬೆಳ್ಳಿ ಬೆಲೆ ಸಾರ್ವಕಾಲಿಕ ದಾಖಲೆ; ಚಿನ್ನದ ಬೆಲೆ ಅಲ್ಪ ಹೆಚ್ಚಳ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 10, 2025 | 11:08 AM

Share

ಬೆಂಗಳೂರು, ಡಿಸೆಂಬರ್ 10: ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದೆ. ಇಂದು ಬುಧವಾರ ಈ ಬಿಳಿ ಲೋಹದ ಬೆಲೆ ಒಮ್ಮೆಗೇ 9 ರೂ ಜಿಗಿತ ಆಗಿದೆ. ಬೆಂಗಳೂರು ಮೊದಲಾದೆಡೆ ಬೆಲೆ (Silver rates) 199 ರೂಗೆ ಏರಿದೆ. ತಮಿಳುನಾಡು, ಕೇರಳ ಮೊದಲಾದೆಡೆ ಬೆಲೆ 207 ರೂಗೆ ಜಂಪ್ ಆಗಿದೆ. ಇದು ಬೆಳ್ಳಿ ಬೆಲೆಯ ಐತಿಹಾಸಿಕ ದಾಖಲೆ ಬೆಲೆ. ಅಕ್ಟೋಬರ್ 15ರಂದು ಇದರ ಬೆಲೆ 190 ರೂ ಮುಟ್ಟಿ ದಾಖಲೆ ಬರೆದಿತ್ತು. ಇವತ್ತು ಆ ದಾಖಲೆಯನ್ನು ಮುರಿದಿದೆ ಬೆಳ್ಳಿ. ಇನ್ನು, ಚಿನ್ನದ ಬೆಲೆ ಇಂದು 20 ರೂಗಳಷ್ಟು ಅಲ್ಪ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,19,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,30,031 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,19,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 10ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,031 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,945 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,773 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,031 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,945 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,945 ರೂ
  • ಚೆನ್ನೈ: 12,030 ರೂ
  • ಮುಂಬೈ: 11,945 ರೂ
  • ದೆಹಲಿ: 11,960 ರೂ
  • ಕೋಲ್ಕತಾ: 11,945 ರೂ
  • ಕೇರಳ: 11,945 ರೂ
  • ಅಹ್ಮದಾಬಾದ್: 11,950 ರೂ
  • ಜೈಪುರ್: 11,960 ರೂ
  • ಲಕ್ನೋ: 11,960 ರೂ
  • ಭುವನೇಶ್ವರ್: 11,945 ರೂ

ಇದನ್ನೂ ಓದಿ: ನವೆಂಬರ್​ನಲ್ಲಿ ವಾಹನಗಳ ಮಾರಾಟ ಹೆಚ್ಚಳ; ಡಿಸೆಂಬರ್​ನಲ್ಲೂ ಇದೇ ಟ್ರೆಂಡ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 537 ರಿಂಗಿಟ್ (11,723 ರುಪಾಯಿ)
  • ದುಬೈ: 468.75 ಡಿರಾಮ್ (11,482 ರುಪಾಯಿ)
  • ಅಮೆರಿಕ: 131 ಡಾಲರ್ (11,785 ರುಪಾಯಿ)
  • ಸಿಂಗಾಪುರ: 170.40 ಸಿಂಗಾಪುರ್ ಡಾಲರ್ (11,823 ರುಪಾಯಿ)
  • ಕತಾರ್: 468 ಕತಾರಿ ರಿಯಾಲ್ (11,552 ರೂ)
  • ಸೌದಿ ಅರೇಬಿಯಾ: 478 ಸೌದಿ ರಿಯಾಲ್ (11,459 ರುಪಾಯಿ)
  • ಓಮನ್: 49.35 ಒಮಾನಿ ರಿಯಾಲ್ (11,531 ರುಪಾಯಿ)
  • ಕುವೇತ್: 38.44 ಕುವೇತಿ ದಿನಾರ್ (11,260 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 199 ರೂ
  • ಚೆನ್ನೈ: 207 ರೂ
  • ಮುಂಬೈ: 199 ರೂ
  • ದೆಹಲಿ: 199 ರೂ
  • ಕೋಲ್ಕತಾ: 199 ರೂ
  • ಕೇರಳ: 207 ರೂ
  • ಅಹ್ಮದಾಬಾದ್: 199 ರೂ
  • ಜೈಪುರ್: 199 ರೂ
  • ಲಕ್ನೋ: 199 ರೂ
  • ಭುವನೇಶ್ವರ್: 207 ರೂ
  • ಪುಣೆ: 199

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ