Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಸೋಮವಾರ ಭರ್ಜರಿ ಏರಿಕೆ

Bullion Market 2025 November 10th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರತದಲ್ಲಿ ಇಂದು ಭರ್ಜರಿ ಜಿಗಿತ ಕಂಡಿವೆ. ಚಿನ್ನದ ಬೆಲೆ 110 ರೂ ಏರಿದರೆ, ಬೆಳ್ಳಿ ಬೆಲೆ 2.50 ರೂ ಏರಿದೆ. ಆಭರಣ ಚಿನ್ನದ ಬೆಲೆ 11,185 ರೂನಿಂದ 11,295 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,202 ರೂನಿಂದ 12,322 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 155 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 167 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಸೋಮವಾರ ಭರ್ಜರಿ ಏರಿಕೆ
ಚಿನ್ನ

Updated on: Nov 10, 2025 | 11:12 AM

ಬೆಂಗಳೂರು, ನವೆಂಬರ್ 10: ಕಳೆದ 10-12 ದಿನಗಳಿಂದ 1150 ರೂಗಳಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ (Gold rate) ಇವತ್ತು ಸೋಮವಾರ ಒಂದೇ ದಿನ 110 ರೂ ಹೆಚ್ಚಿದೆ. ಬೆಳ್ಳಿ ಬೆಲೆಯೂ ಇಂದು ಹೈಜಂಪ್ ಆಗಿದೆ. 152.50 ರೂ ಇದ್ದ ಒಂದು ಗ್ರಾಮ್ ಬೆಳ್ಳಿ ಬೆಲೆ ಇವತ್ತು 155 ರೂಗೆ ಏರಿದೆ. ಭಾರತದಲ್ಲಿ ಮಾತ್ರ ಇಂದು ಈ ಏರಿಕೆ ಕಂಡು ಬಂದಿರುವುದು. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,12,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,23,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,12,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 10ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,322 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,295 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,242 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 155 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,322 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,295 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 155 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,295 ರೂ
  • ಚೆನ್ನೈ: 11,410 ರೂ
  • ಮುಂಬೈ: 11,295 ರೂ
  • ದೆಹಲಿ: 11,310 ರೂ
  • ಕೋಲ್ಕತಾ: 11,295 ರೂ
  • ಕೇರಳ: 11,295 ರೂ
  • ಅಹ್ಮದಾಬಾದ್: 11,300 ರೂ
  • ಜೈಪುರ್: 11,310 ರೂ
  • ಲಕ್ನೋ: 11,310 ರೂ
  • ಭುವನೇಶ್ವರ್: 11,295 ರೂ

ಇದನ್ನೂ ಓದಿ: ಡಿಜಿಟಲ್ ಗೋಲ್ಡ್​ನಲ್ಲಿ ಹೂಡಿಕೆ ಸುರಕ್ಷಿತವಲ್ಲವಾ? ಸೆಬಿ ಹೇಳಿದ್ದೇನು? ಪರ್ಯಾಯಗಳೇನು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 528 ರಿಂಗಿಟ್ (11,237 ರುಪಾಯಿ)
  • ದುಬೈ: 446.25 ಡಿರಾಮ್ (10,772 ರುಪಾಯಿ)
  • ಅಮೆರಿಕ: 124.50 ಡಾಲರ್ (11,040 ರುಪಾಯಿ)
  • ಸಿಂಗಾಪುರ: 163.90 ಸಿಂಗಾಪುರ್ ಡಾಲರ್ (11,160 ರುಪಾಯಿ)
  • ಕತಾರ್: 446 ಕತಾರಿ ರಿಯಾಲ್ (10,851 ರೂ)
  • ಸೌದಿ ಅರೇಬಿಯಾ: 454 ಸೌದಿ ರಿಯಾಲ್ (10,735 ರುಪಾಯಿ)
  • ಓಮನ್: 47.05 ಒಮಾನಿ ರಿಯಾಲ್ (10,837 ರುಪಾಯಿ)
  • ಕುವೇತ್: 36.61 ಕುವೇತಿ ದಿನಾರ್ (10,571 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 155 ರೂ
  • ಚೆನ್ನೈ: 167 ರೂ
  • ಮುಂಬೈ: 155 ರೂ
  • ದೆಹಲಿ: 155 ರೂ
  • ಕೋಲ್ಕತಾ: 155 ರೂ
  • ಕೇರಳ: 167 ರೂ
  • ಅಹ್ಮದಾಬಾದ್: 155 ರೂ
  • ಜೈಪುರ್: 155 ರೂ
  • ಲಕ್ನೋ: 155 ರೂ
  • ಭುವನೇಶ್ವರ್: 167 ರೂ
  • ಪುಣೆ: 155

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us