AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​​ಗೆ 470 ರೂ ಏರಿಕೆ; ಇವತ್ತಿನ ದರಪಟ್ಟಿ

Bullion Market 2025 May 11th: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ತುಸು ಏರಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಹತ್ತು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​​ಗೆ 470 ರೂನಷ್ಟು ಏರಿಕೆ ಆಗಿದೆ. 8,575 ರೂ ಇದ್ದದ್ದು 9,045 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 9,868 ರೂಗೆ ಏರಿದೆ. ಬೆಳ್ಳಿ ಬೆಲೆ 99 ರೂ ಹಾಗೂ 111 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​​ಗೆ 470 ರೂ ಏರಿಕೆ; ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 11, 2025 | 10:30 AM

Share

ಬೆಂಗಳೂರು, ಮೇ 11: ಚಿನ್ನದ ಬೆಲೆ ಈ ವಾರ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ವಾರಾಂತ್ಯದಲ್ಲಿ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ (Gold rate) ತುಸು ಹೆಚ್ಚಳ ಆಗಿದೆ. ಜಾಗತಿಕ ಮಾರುಕಟ್ಟೆ ವರ್ತನೆಗೆ ಅನುಗುಣವಾಗಿ ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಬದಲಾವಣೆಗಳಾಗಿವೆ. ಆಭರಣ ಚಿನ್ನದ ಬೆಲೆ 9,015 ರೂ ಇದ್ದದ್ದು 9,045 ರೂಗೆ ಏರಿದೆ. ಹತ್ತು ದಿನಗಳ ಹಿಂದೆ 8,575 ರೂ ಇದ್ದ ಚಿನ್ನದ ಬೆಲೆಯಲ್ಲಿ 470 ರೂನಷ್ಟು ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,680 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,010 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,680 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,450 ರೂ
  • ಚೆನ್ನೈ: 90,450 ರೂ
  • ಮುಂಬೈ: 90,450 ರೂ
  • ದೆಹಲಿ: 90,600 ರೂ
  • ಕೋಲ್ಕತಾ: 90,450 ರೂ
  • ಕೇರಳ: 90,450 ರೂ
  • ಅಹ್ಮದಾಬಾದ್: 90,500 ರೂ
  • ಜೈಪುರ್: 90,600 ರೂ
  • ಲಕ್ನೋ: 90,600 ರೂ
  • ಭುವನೇಶ್ವರ್: 90,450 ರೂ

ಇದನ್ನೂ ಓದಿ: ಶೇ. 20 ಯೆಸ್ ಬ್ಯಾಂಕ್ ಷೇರುಗಳನ್ನು 13,483 ಕೋಟಿ ರೂಗೆ ಖರೀದಿಸಲಿರುವ ಜಪಾನ್​​ನ ಎಸ್​​​ಎಂಬಿಸಿ ಬ್ಯಾಂಕ್

ಇದನ್ನೂ ಓದಿ
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,530 ರಿಂಗಿಟ್ (90,000 ರುಪಾಯಿ)
  • ದುಬೈ: 3,710 ಡಿರಾಮ್ (86,270 ರುಪಾಯಿ)
  • ಅಮೆರಿಕ: 1,005 ಡಾಲರ್ (85,840 ರುಪಾಯಿ)
  • ಸಿಂಗಾಪುರ: 1,353 ಸಿಂಗಾಪುರ್ ಡಾಲರ್ (89,040 ರುಪಾಯಿ)
  • ಕತಾರ್: 3,735 ಕತಾರಿ ರಿಯಾಲ್ (87,520 ರೂ)
  • ಸೌದಿ ಅರೇಬಿಯಾ: 3,790 ಸೌದಿ ರಿಯಾಲ್ (86,300 ರುಪಾಯಿ)
  • ಓಮನ್: 393.50 ಒಮಾನಿ ರಿಯಾಲ್ (87,300 ರುಪಾಯಿ)
  • ಕುವೇತ್: 304.20 ಕುವೇತಿ ದಿನಾರ್ (84,700 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,900 ರೂ
  • ಚೆನ್ನೈ: 11,100 ರೂ
  • ಮುಂಬೈ: 9,900 ರೂ
  • ದೆಹಲಿ: 9,900 ರೂ
  • ಕೋಲ್ಕತಾ: 9,900 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 9,900 ರೂ
  • ಜೈಪುರ್: 9,900 ರೂ
  • ಲಕ್ನೋ: 9,900 ರೂ
  • ಭುವನೇಶ್ವರ್: 11,100 ರೂ
  • ಪುಣೆ: 9,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ