Gold Rates: ಚಿನ್ನದ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026, May 11th: ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ತುಸು ಇಳಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿ ಹೊಂದಿದೆ. ಆಭರಣ ಚಿನ್ನದ ಬೆಲೆ 13,945 ರೂ ಹೊಂದಿದರೆ, ಅಪರಂಜಿ ಚಿನ್ನದ ಬೆಲೆ 15,213 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 275 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 285 ರೂ ಇದೆ.

Gold Rates: ಚಿನ್ನದ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Shutterstock

Updated on: May 11, 2026 | 12:18 PM

ಬೆಂಗಳೂರು, ಮೇ 11: ವಾರದ ಹಿಂದೆ ಎರಡು ದಿನದಲ್ಲಿ 300 ರೂಗಳಿಗೂ ಹೆಚ್ಚಿನ ಪ್ರಮಾಣದಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಕಳೆದ ನಾಲ್ಕೈದು ದಿನಗಳಿಂದ ಇಳಿಮುಖ ಹಾದಿಯಲ್ಲಿದೆ. ವಾರಾಂತ್ಯದಲ್ಲಿ 30 ರೂನಷ್ಟು ಕಡಿಮೆಗೊಂಡಿದ್ದ ಬಂಗಾರದ ದರ ಇವತ್ತು ಸೋಮವಾರ 20 ರೂ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿಕೆಯಾದರೆ, ಇನ್ನೂ ಕೆಲವೆಡೆ ಸ್ವಲ್ಪ ಹೆಚ್ಚಳ ಆಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಾರಾಂತ್ಯದಲ್ಲಿ ಇದು ಐದು ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 11ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,213 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,945 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,410 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,213 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,945 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,945 ರೂ
  • ಚೆನ್ನೈ: 14,100 ರೂ
  • ಮುಂಬೈ: 13,945 ರೂ
  • ದೆಹಲಿ: 13,960 ರೂ
  • ಕೋಲ್ಕತಾ: 13,945 ರೂ
  • ಕೇರಳ: 13,945 ರೂ
  • ಅಹ್ಮದಾಬಾದ್: 13,950 ರೂ
  • ಜೈಪುರ್: 13,960 ರೂ
  • ಲಕ್ನೋ: 13,960 ರೂ
  • ಭುವನೇಶ್ವರ್: 13,945 ರೂ

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 567 ರಿಂಗಿಟ್ (13,735 ರುಪಾಯಿ)
  • ದುಬೈ: 526.25 ಡಿರಾಮ್ (13,637 ರುಪಾಯಿ)
  • ಅಮೆರಿಕ: 147.50 ಡಾಲರ್ (14,038 ರುಪಾಯಿ)
  • ಸಿಂಗಾಪುರ: 185.20 ಸಿಂಗಾಪುರ್ ಡಾಲರ್ (13,883 ರುಪಾಯಿ)
  • ಕತಾರ್: 523 ಕತಾರಿ ರಿಯಾಲ್ (13,654 ರೂ)
  • ಸೌದಿ ಅರೇಬಿಯಾ: 535 ಸೌದಿ ರಿಯಾಲ್ (13,572 ರುಪಾಯಿ)
  • ಓಮನ್: 55.80 ಒಮಾನಿ ರಿಯಾಲ್ (13,793 ರುಪಾಯಿ)
  • ಕುವೇತ್: 43.28 ಕುವೇತಿ ದಿನಾರ್ (13,449 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 285 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 285 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 285 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us