
ಬೆಂಗಳೂರು, ಡಿಸೆಂಬರ್ 12: ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ (Fed rates) ಕಡಿತಗೊಳಿಸಿದ ಬೆನ್ನಲ್ಲೇ ನಿರೀಕ್ಷೆಯಂತೆ ಚಿನ್ನ ಮತ್ತು ಬೆಳ್ಳಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಈ ಎರಡೂ ಲೋಹಗಳ ಬೆಲೆ ಗಣನೀಯವಾಗಿ ಹೆಚ್ಚಿದೆ. ಚಿನ್ನದ ಬೆಲೆ ಗ್ರಾಮ್ಗೆ 225-250 ರೂಗಳಷ್ಟು ಏರಿಕೆ ಕಂಡಿದೆ. ಬೆಳ್ಳಿ ಬೆಲೆ 4 ರೂನಿಂದ 6 ರೂವರೆಗೂ ಏರಿದೆ. ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ ಬರೆದಿದೆ. ಪ್ರಧಾನ ಮಾರುಕಟ್ಟೆಗಳಲ್ಲಿ ಇದೇ ಮೊದಲ ಬಾರಿಗೆ ಅದರ ಬೆಲೆ 204 ರೂ ಮುಟ್ಟಿದೆ. ಚೆನ್ನೈನಂತಹ ನಗರಗಳಲ್ಲಿ ಬೆಲೆ 215 ರೂಗೆ ಏರಿದೆ. ಚಿನ್ನದ ಬೆಲೆ ವಿದೇಶಗಳಲ್ಲೂ ಇಂದು ಶುಕ್ರವಾರ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,21,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,32,660 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,21,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 20,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 21,500 ರೂ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಅಮೆರಿಕದ ಬಡ್ಡಿದರ ಇಳಿಕೆ; ಚಿನ್ನ, ಬೆಳ್ಳಿ ಬೆಲೆಗಳು ಮೇಲೇರುತ್ವಾ?
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ