
ಬೆಂಗಳೂರು, ಜೂನ್ 13: ಚಿನ್ನ ಮತ್ತು ಬೆಳ್ಳಿ ಬೆಲೆಗಳು (gold and silver rates) ಇವತ್ತು ಭರ್ಜರಿ ಏರಿಕೆಗೊಂಡು ಹೊಸ ದಾಖಲೆ ಬರೆದಿವೆ. ಕಳೆದ ಎರಡು ದಿನದಲ್ಲಿ ಗ್ರಾಮ್ಗೆ 155 ರೂ ಏರಿದ್ದ ಚಿನ್ನದ ಬೆಲೆ ಇವತ್ತು ಶುಕ್ರವಾರ ಒಂದೇ ದಿನ 195 ರೂನಷ್ಟು ಜಂಪ್ ಆಗಿದೆ. ಮೂರು ದಿನದಲ್ಲಿ 350 ರೂ ಏರಿಕೆ ಆದಂತಾಗಿದೆ. ಭಾರತದಲ್ಲಿ ಮಾತ್ರವಲ್ಲ, ಹಲವು ದೇಶಗಳಲ್ಲೂ ಚಿನ್ನದ ಬೆಲೆ ಭರ್ಜರಿ ಏರಿಕೆ ಕಂಡಿದೆ. 18 ಕ್ಯಾರಟ್ ಚಿನ್ನದ ಬೆಲೆ ಮೊದಲ ಬಾರಿಗೆ 7,600 ರೂ ಗಡಿ ದಾಟಿದೆ. ಅಪರಂಜಿ ಚಿನ್ನವೂ ಮೊದಲ ಬಾರಿಗೆ 1.01 ಲಕ್ಷ ರೂ ಗಡಿ ದಾಟಿದೆ. ಬೆಲೆ ಏರಿಕೆಯಲ್ಲಿ ಚಿನ್ನದೊಂದಿಗೆ ಬೆಳ್ಳಿಯೂ ಪೈಪೋಟಿ ನಡೆಸಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಬೆಲೆ 110 ರೂ ಮುಟ್ಟಿದೆ. ಚೆನ್ನೈನಲ್ಲಿ ಬೆಲೆ ಮೊದಲ ಬಾರಿಗೆ 120 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,000 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಮೇ ತಿಂಗಳ ಹಣದುಬ್ಬರ ಶೇ. 2.82; ಇದು ಆರು ವರ್ಷದಲ್ಲೇ ಕನಿಷ್ಠ ಬೆಲೆ ಏರಿಕೆ ಮಟ್ಟ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ