AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಆಮದು ಸುಂಕ ಎಫೆಕ್ಟ್; 10 ಗ್ರಾಂ ಚಿನ್ನದ ಬೆಲೆ 12,750 ರೂ ಏರಿಕೆ

Gold Price 13 May 2026: ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಏರಿಕೆಯಿಂದಾಗಿ ಬೆಲೆಗಳು ಸಿಕ್ಕಾಪಟ್ಟೆ ಹೆಚ್ಚಿವೆ. ಚಿನ್ನದ ಬೆಲೆ ಗ್ರಾಮ್​ಗೆ 1,275 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 14,115 ರೂನಿಂದ 15,390 ರೂ ಏರಿದೆ. ಅಪರಂಜಿ ಚಿನ್ನದ ಬೆಲೆ 16,789 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 310 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 330 ರೂ ಇದೆ.

Gold Rate: ಆಮದು ಸುಂಕ ಎಫೆಕ್ಟ್; 10 ಗ್ರಾಂ ಚಿನ್ನದ ಬೆಲೆ 12,750 ರೂ ಏರಿಕೆ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:May 13, 2026 | 11:33 AM

Share

ಬೆಂಗಳೂರು, ಮೇ 13: ಚಿನ್ನ, ಬೆಳ್ಳಿ ಮೇಲೆ ಕೆಂದ್ರ ಸರ್ಕಾರ ದಿಢೀರನೇ ಆಮದು ಸುಂಕ (Customs Duty) ಏರಿಕೆ ಮಾಡಿದ ಬೆನ್ನಲ್ಲೇ ಇವುಗಳ ಬೆಲೆ (Gold and Silver Rates) ಭರ್ಜರಿ ಏರಿಕೆ ಕಂಡಿವೆ. ಸರ್ಕಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಆಮದು ಸುಂಕವನ್ನು ಶೇ. 6ರಿಂದ ಶೇ. 15ಕ್ಕೆ ಏರಿಸಿತು. ಇದರಿಂದ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಈ ಅಮೂಲ್ಯ ವಸ್ತುಗಳ ಬೆಲೆಯಲ್ಲಿ ಶೇ. 6ರಷ್ಟು ಹೆಚ್ಚಳವಾಗಿದೆ. ಜ್ಯುವೆಲರಿ ಅಸೋಸಿಯೇಶನ್​ನ ಬೆಲೆ ಪಟ್ಟಿ ಪ್ರಕಾರ ಆಭರಣ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ ಬರೋಬ್ಬರಿ 1,275 ರೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲಿ 20 ರೂ ಜಂಪ್ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಕಡಿಮೆ ಆದರೂ, ಭಾರತದಲ್ಲಿ ಆಮದು ಸಂಕ ಹೆಚ್ಚಳದಿಂದಾಗಿ ಬೆಲೆಗಳು ಭಾರೀ ಏರಿಕೆ ಪಡೆದಿವೆ.

ಎರಡು ವರ್ಷದ ಹಿಂದೆ, 2024-25ರ ಕೇಂದ್ರ ಬಜೆಟ್​ನಲ್ಲಿ ಚಿನ್ನದ ಮೇಲಿನ ಆಮದು ಸುಂಕವನ್ನು ಶೇ. 15ರಿಂದ ಶೇ. 6ಕ್ಕೆ ಇಳಿಸಲಾಗಿತ್ತು. ಈ ಅದೇ ಮಟ್ಟಕ್ಕೆ ಏರಿಸಲಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,53,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,67,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 31,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,53,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 31,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 33,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,789 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,390 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,592 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 310 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,789 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,390 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 310 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,390 ರೂ
  • ಚೆನ್ನೈ: 15,400 ರೂ
  • ಮುಂಬೈ: 15,390 ರೂ
  • ದೆಹಲಿ: 15,405 ರೂ
  • ಕೋಲ್ಕತಾ: 15,390 ರೂ
  • ಕೇರಳ: 15,390 ರೂ
  • ಅಹ್ಮದಾಬಾದ್: 15,395 ರೂ
  • ಜೈಪುರ್: 15,405 ರೂ
  • ಲಕ್ನೋ: 15,405 ರೂ
  • ಭುವನೇಶ್ವರ್: 15,395 ರೂ

ಇದನ್ನೂ ಓದಿ: ಚಿನ್ನ, ಬೆಳ್ಳಿ ದರ ಇನ್ನಷ್ಟು ಏರಿಕೆಯಾಗೋದು ಫಿಕ್ಸ್: ಆಮದು ಸುಂಕ ಭರ್ಜರಿ ಹೆಚ್ಚಿಸಿದ ಕೇಂದ್ರ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 569 ರಿಂಗಿಟ್ (13,853 ರುಪಾಯಿ)
  • ದುಬೈ: 522 ಡಿರಾಮ್ (13,586 ರುಪಾಯಿ)
  • ಅಮೆರಿಕ: 146 ಡಾಲರ್ (13,966 ರುಪಾಯಿ)
  • ಸಿಂಗಾಪುರ: 185.90 ಸಿಂಗಾಪುರ್ ಡಾಲರ್ (13,972 ರುಪಾಯಿ)
  • ಕತಾರ್: 519.50 ಕತಾರಿ ರಿಯಾಲ್ (13,625 ರೂ)
  • ಸೌದಿ ಅರೇಬಿಯಾ: 531 ಸೌದಿ ರಿಯಾಲ್ (13,529 ರುಪಾಯಿ)
  • ಓಮನ್: 55.55 ಒಮಾನಿ ರಿಯಾಲ್ (13,794 ರುಪಾಯಿ)
  • ಕುವೇತ್: 42.93 ಕುವೇತಿ ದಿನಾರ್ (13,402 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 310 ರೂ
  • ಚೆನ್ನೈ: 330 ರೂ
  • ಮುಂಬೈ: 310 ರೂ
  • ದೆಹಲಿ: 310 ರೂ
  • ಕೋಲ್ಕತಾ: 310 ರೂ
  • ಕೇರಳ: 330 ರೂ
  • ಅಹ್ಮದಾಬಾದ್: 310 ರೂ
  • ಜೈಪುರ್: 310 ರೂ
  • ಲಕ್ನೋ: 310 ರೂ
  • ಭುವನೇಶ್ವರ್: 330 ರೂ
  • ಪುಣೆ: 310

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:04 am, Wed, 13 May 26

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ