AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಸೂಪರ್ ಜಿಗಿತ

Bullion Market 2025 November 13th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಗುರುವಾರ ಏರಿಕೆ ಆಗಿವೆ. ಬೆಳ್ಳಿ ಬೆಲೆಯಂತೂ ಒಂದೇ ದಿನದಲ್ಲಿ ಗ್ರಾಮ್​ಗೆ 10 ರೂ ಜಿಗಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,505 ರೂನಿಂದ 11,715 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,780 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 162 ರೂನಿಂದ 172 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 182 ರೂಗೆ ಏರಿದೆ.

Gold Rate Today Bangalore: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಸೂಪರ್ ಜಿಗಿತ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 13, 2025 | 11:25 AM

Share

ಬೆಂಗಳೂರು, ನವೆಂಬರ್ 13: ಬೆಳ್ಳಿ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಇಂದು ಒಂದೇ ದಿನಕ್ಕೆ 10 ರೂ ಜಿಗಿತ ಕಂಡಿದೆ. ನಿನ್ನೆ ಇದರ ಬೆಲೆ 2 ರೂ ಹೆಚ್ಚಿತ್ತು. ಚಿನ್ನದ ಬೆಲೆಯೂ (gold rate) ಕೂಡ ಏರಿಕೆಯ ಹಾದಿಗೆ ಮರಳಿದೆ. ಗುರುವಾರ ಚಿನ್ನದ ಬೆಲೆಯಲ್ಲಿ 210 ರೂಗಳಷ್ಟು ಹೆಚ್ಚಳ ಆಗಿದೆ. ಆಭರಣ ಚಿನ್ನದ ಬೆಲೆ 11,700 ರೂ ಗಡಿದಾಟಿದೆ. ಅಪರಂಜಿ ಚಿನ್ನ 12,800 ರೂ ಗಡಿ ಸಮೀಪಕ್ಕೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,17,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,27,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,17,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,200 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,780 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,715 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,585 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 172 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,780 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,715 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 172 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,715 ರೂ
  • ಚೆನ್ನೈ: 11,800 ರೂ
  • ಮುಂಬೈ: 11,715 ರೂ
  • ದೆಹಲಿ: 11,730 ರೂ
  • ಕೋಲ್ಕತಾ: 11,715 ರೂ
  • ಕೇರಳ: 11,715 ರೂ
  • ಅಹ್ಮದಾಬಾದ್: 11,720 ರೂ
  • ಜೈಪುರ್: 11,730 ರೂ
  • ಲಕ್ನೋ: 11,730 ರೂ
  • ಭುವನೇಶ್ವರ್: 11,715 ರೂ

ಇದನ್ನೂ ಓದಿ: ಪಿಎಂ ಕಿಸಾನ್: ಈ ಬಾರಿ ಕೆಲ ರೈತರಿಗೆ 2,000 ಬದಲು 4,000 ರೂ ಸಿಗುತ್ತಾ? ಇಲ್ಲಿದೆ ಕಾರಣ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 540 ರಿಂಗಿಟ್ (11,593 ರುಪಾಯಿ)
  • ದುಬೈ: 467 ಡಿರಾಮ್ (11,276 ರುಪಾಯಿ)
  • ಅಮೆರಿಕ: 130 ಡಾಲರ್ (11,529 ರುಪಾಯಿ)
  • ಸಿಂಗಾಪುರ: 167.60 ಸಿಂಗಾಪುರ್ ಡಾಲರ್ (11,421 ರುಪಾಯಿ)
  • ಕತಾರ್: 465.50 ಕತಾರಿ ರಿಯಾಲ್ (11,325 ರೂ)
  • ಸೌದಿ ಅರೇಬಿಯಾ: 475 ಸೌದಿ ರಿಯಾಲ್ (11,232 ರುಪಾಯಿ)
  • ಓಮನ್: 49.20 ಒಮಾನಿ ರಿಯಾಲ್ (11,333 ರುಪಾಯಿ)
  • ಕುವೇತ್: 38.20 ಕುವೇತಿ ದಿನಾರ್ (11,030 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 172 ರೂ
  • ಚೆನ್ನೈ: 182 ರೂ
  • ಮುಂಬೈ: 172 ರೂ
  • ದೆಹಲಿ: 172 ರೂ
  • ಕೋಲ್ಕತಾ: 172 ರೂ
  • ಕೇರಳ: 182 ರೂ
  • ಅಹ್ಮದಾಬಾದ್: 172 ರೂ
  • ಜೈಪುರ್: 172 ರೂ
  • ಲಕ್ನೋ: 172 ರೂ
  • ಭುವನೇಶ್ವರ್: 182 ರೂ
  • ಪುಣೆ: 172

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ