Gold Rates: ಚಿನ್ನದ ಬೆಲೆ 135 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2026 April 14th: ನಿನ್ನೆ ಗ್ರಾಮ್​ಗೆ 35 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 135 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 13,975 ರೂನಿಂದ 14,110 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,393 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rates: ಚಿನ್ನದ ಬೆಲೆ 135 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Apr 14, 2026 | 11:42 AM

ಬೆಂಗಳೂರು, ಏಪ್ರಿಲ್ 14: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಳಿತಗಳನ್ನು ಕಾಣುತ್ತಲೇ ಇದೆ. ಒಂದು ದಿನ ಕಡಿಮೆಗೊಂಡರೆ, ಮತ್ತೊಂದು ದಿನ ಏರಿಕೆ ಆಗುತ್ತಿದೆ. ಇವತ್ತು ಮಂಗಳವಾರ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​​ಗೆ 135 ರೂಗಳಷ್ಟು ಹೆಚ್ಚಳ ಆಗಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಗಡಿ ದಾಟಿ ಹೋಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ನಿನ್ನೆಯ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,393 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,110 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,545 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,393 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,110 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,110 ರೂ
  • ಚೆನ್ನೈ: 14,220 ರೂ
  • ಮುಂಬೈ: 14,110 ರೂ
  • ದೆಹಲಿ: 14,125 ರೂ
  • ಕೋಲ್ಕತಾ: 14,110 ರೂ
  • ಕೇರಳ: 14,110 ರೂ
  • ಅಹ್ಮದಾಬಾದ್: 14,115 ರೂ
  • ಜೈಪುರ್: 14,125 ರೂ
  • ಲಕ್ನೋ: 14,125 ರೂ
  • ಭುವನೇಶ್ವರ್: 14,110 ರೂ

ಇದನ್ನೂ ಓದಿ: ಕಿಸಾನ್ ವಿಕಾಸ್ ಪತ್ರ; ಹಣ ಡಬಲ್ ಮಾಡುವ ಪೋಸ್ಟ್ ಆಫೀಸ್ ಸ್ಕೀಮ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 581 ರಿಂಗಿಟ್ (13,709 ರುಪಾಯಿ)
  • ದುಬೈ: 527.75 ಡಿರಾಮ್ (13,406 ರುಪಾಯಿ)
  • ಅಮೆರಿಕ: 147 ಡಾಲರ್ (13,716 ರುಪಾಯಿ)
  • ಸಿಂಗಾಪುರ: 189.40 ಸಿಂಗಾಪುರ್ ಡಾಲರ್ (13,879 ರುಪಾಯಿ)
  • ಕತಾರ್: 526 ಕತಾರಿ ರಿಯಾಲ್ (13,479 ರೂ)
  • ಸೌದಿ ಅರೇಬಿಯಾ: 538 ಸೌದಿ ರಿಯಾಲ್ (13,376 ರುಪಾಯಿ)
  • ಓಮನ್: 56.05 ಒಮಾನಿ ರಿಯಾಲ್ (13,583 ರುಪಾಯಿ)
  • ಕುವೇತ್: 43.56 ಕುವೇತಿ ದಿನಾರ್ (13,267 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us