AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಹೊಸ ದಾಖಲೆ; ಬೆಳ್ಳಿ ಬೆಲೆ ಇಳಿಕೆ

Bullion Market 2025 December 14th: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಏರಿಕೆ ಕಂಡರೆ, ಬೆಳ್ಳಿ ಬೆಲೆ ಇಳಿದಿದೆ. ಚಿನ್ನದ ಬೆಲೆ ಹೊಸ ದಾಖಲೆ ಬರೆದಿದೆ. 22 ಕ್ಯಾರಟ್ ಚಿನ್ನದ ಬೆಲೆ 12,160 ರೂನಿಂದ 12,275 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 13,391 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 198 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 210 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ ಹೊಸ ದಾಖಲೆ; ಬೆಳ್ಳಿ ಬೆಲೆ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 14, 2025 | 10:58 AM

Share

ಬೆಂಗಳೂರು, ಡಿಸೆಂಬರ್ 14: ಬೆಳ್ಳಿ ಬೆಲೆ ಬಳಿಕ ಚಿನ್ನದ ಬೆಲೆಯೂ (gold rate) ಸಾರ್ವಕಾಲಿಕ ದಾಖಲೆ ಬರೆದಿದೆ. ಈ ವಾರಾಂತ್ಯದಲ್ಲಿ ಸ್ವರ್ಣ ದರ ನೂರು ರುಪಾಯಿಗಳಿಗೂ ಅಧಿಕ ಮೊತ್ತದಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 13,400 ರೂ ಸಮೀಪ ಹೋಗಿದೆ. ಅಕ್ಟೋಬರ್ ತಿಂಗಳಲ್ಲಿ ಕಂಡಿದ್ದ ದಾಖಲೆ ಬೆಲೆಯನ್ನು ಮುರಿದಿದೆ. ಆಭರಣ ಚಿನ್ನದ ಬೆಲೆ 12,275 ರೂಗೆ ಏರಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಇದೇ ವೇಳೆ, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಬೆಳ್ಳಿ ಬೆಲೆ 5-6 ರೂಗಳಷ್ಟು ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,22,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,33,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,22,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 21,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,391 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,275 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,043 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 198 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,391 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,275 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 198 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,275 ರೂ
  • ಚೆನ್ನೈ: 12,370 ರೂ
  • ಮುಂಬೈ: 12,275 ರೂ
  • ದೆಹಲಿ: 12,290 ರೂ
  • ಕೋಲ್ಕತಾ: 12,275 ರೂ
  • ಕೇರಳ: 12,275 ರೂ
  • ಅಹ್ಮದಾಬಾದ್: 12,280 ರೂ
  • ಜೈಪುರ್: 12,290 ರೂ
  • ಲಕ್ನೋ: 12,290 ರೂ
  • ಭುವನೇಶ್ವರ್: 12,275 ರೂ

ಇದನ್ನೂ ಓದಿ: ಮಲ್ಟಿಬ್ಯಾಗರ್ ಷೇರುಗಳನ್ನು ಗುರುತಿಸಲು ಪಳಗಿರುವ ರಾಮದೇವ್ ಅಗರ್ವಾಲ್ ಅವರ ಟ್ರಿಕ್ಸ್​ಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 545 ರಿಂಗಿಟ್ (12,034 ರುಪಾಯಿ)
  • ದುಬೈ: 479.75 ಡಿರಾಮ್ (11,831 ರುಪಾಯಿ)
  • ಅಮೆರಿಕ: 133.50 ಡಾಲರ್ (12,080 ರುಪಾಯಿ)
  • ಸಿಂಗಾಪುರ: 172.90 ಸಿಂಗಾಪುರ್ ಡಾಲರ್ (12,114 ರುಪಾಯಿ)
  • ಕತಾರ್: 478 ಕತಾರಿ ರಿಯಾಲ್ (11,881 ರೂ)
  • ಸೌದಿ ಅರೇಬಿಯಾ: 487 ಸೌದಿ ರಿಯಾಲ್ (11,746 ರುಪಾಯಿ)
  • ಓಮನ್: 50.50 ಒಮಾನಿ ರಿಯಾಲ್ (11,884 ರುಪಾಯಿ)
  • ಕುವೇತ್: 39.11 ಕುವೇತಿ ದಿನಾರ್ (11,539 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 198 ರೂ
  • ಚೆನ್ನೈ: 210 ರೂ
  • ಮುಂಬೈ: 198 ರೂ
  • ದೆಹಲಿ: 198 ರೂ
  • ಕೋಲ್ಕತಾ: 198 ರೂ
  • ಕೇರಳ: 210 ರೂ
  • ಅಹ್ಮದಾಬಾದ್: 198 ರೂ
  • ಜೈಪುರ್: 198 ರೂ
  • ಲಕ್ನೋ: 198 ರೂ
  • ಭುವನೇಶ್ವರ್: 210 ರೂ
  • ಪುಣೆ: 198

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ