AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆ ಹೊಸ ದಾಖಲೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2025 July 15th: ಇಂದು ಮಂಗಳವಾರ ಚಿನ್ನದ ಬೆಲೆ ಅಲ್ಪ ಇಳಿಕೆ ಪಡೆದರೆ, ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದೆ. ಆಭರಣ ಚಿನ್ನದ ಬೆಲೆ 9,145 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,977 ರೂ ಮುಟ್ಟಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಬೆಳ್ಳಿ ಬೆಲೆ 115 ರೂನಿಂದ 119 ರೂಗೆ ಜಂಪ್ ಆಗಿದೆ. ಚೆನ್ನೈ ಮೊದಲಾದ ಕಡೆ ಅದರ ಬೆಲೆ 125 ರೂನಿಂದ 127 ರೂಗೆ ಏರಿದೆ.

Gold Rate Today Bangalore: ಬೆಳ್ಳಿ ಬೆಲೆ ಹೊಸ ದಾಖಲೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 15, 2025 | 11:00 AM

Share

ಬೆಂಗಳೂರು, ಜುಲೈ 15: ನಿನ್ನೆ 15 ರೂ ಹೆಚ್ಚಿದ್ದ ಚಿನ್ನದ ಬೆಲೆ (gold rate today) ಇವತ್ತು ಮಂಗಳವಾರ 10 ರೂ ಅಲ್ಪ ಇಳಿಕೆ ಪಡೆದಿದೆ. ಆದರೆ, ಬೆಳ್ಳಿ ಬೆಲೆ ಹೊಸ ದಾಖಲೆಯನ್ನೇ ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಇವತ್ತು ಇದರ ಬೆಲೆ ಗ್ರಾಮ್​​ಗೆ 4 ರೂ ಹೆಚ್ಚಿದೆ. 115 ರೂ ಇದ್ದ ಬೆಲೆ 119 ರೂ ಮುಟ್ಟಿದೆ. ಸರಿಯಾಗಿ ಎರಡು ತಿಂಗಳ ಹಿಂದೆ (ಮೇ 15) ಬೆಳ್ಳಿ ಬೆಲೆ 97 ರೂ ಇತ್ತು. ಅಲ್ಲಿಂದೀಚೆ ಬರೋಬ್ಬರಿ 22 ರೂ ಹೆಚ್ಚಿದೆ. ಎರಡು ತಿಂಗಳಲ್ಲಿ ಶೇ. 22ರಷ್ಟು ಬೆಲೆ ಏರಿಕೆ ಪಡೆದಿದೆ ಬೆಳ್ಳಿ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,770 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,770 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,190 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,770 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,190 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,450 ರೂ
  • ಚೆನ್ನೈ: 91,450 ರೂ
  • ಮುಂಬೈ: 91,450 ರೂ
  • ದೆಹಲಿ: 91,600 ರೂ
  • ಕೋಲ್ಕತಾ: 91,450 ರೂ
  • ಕೇರಳ: 91,450 ರೂ
  • ಅಹ್ಮದಾಬಾದ್: 91,500 ರೂ
  • ಜೈಪುರ್: 91,600 ರೂ
  • ಲಕ್ನೋ: 91,600 ರೂ
  • ಭುವನೇಶ್ವರ್: 91,450 ರೂ

ಇದನ್ನೂ ಓದಿ: ಪೋಸ್ಟ್ ಆಫೀಸ್ ಸ್ಕೀಮ್; ಮಾಸಿಕ 10,000 ರೂ ಹೂಡಿಕೆ; 5 ವರ್ಷಕ್ಕೆ 7 ಲಕ್ಷ ರೂ

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,500 ರಿಂಗಿಟ್ (90,900 ರುಪಾಯಿ)
  • ದುಬೈ: 3,745 ಡಿರಾಮ್ (87,620 ರುಪಾಯಿ)
  • ಅಮೆರಿಕ: 1,040 ಡಾಲರ್ (89,370 ರುಪಾಯಿ)
  • ಸಿಂಗಾಪುರ: 1,340 ಸಿಂಗಾಪುರ್ ಡಾಲರ್ (89,790 ರುಪಾಯಿ)
  • ಕತಾರ್: 3,750 ಕತಾರಿ ರಿಯಾಲ್ (88,410 ರೂ)
  • ಸೌದಿ ಅರೇಬಿಯಾ: 3,810 ಸೌದಿ ರಿಯಾಲ್ (87,300 ರುಪಾಯಿ)
  • ಓಮನ್: 397.50 ಒಮಾನಿ ರಿಯಾಲ್ (88,720 ರುಪಾಯಿ)
  • ಕುವೇತ್: 304.20 ಕುವೇತಿ ದಿನಾರ್ (85,540 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,900 ರೂ
  • ಚೆನ್ನೈ: 12,700 ರೂ
  • ಮುಂಬೈ: 11,900 ರೂ
  • ದೆಹಲಿ: 11,900 ರೂ
  • ಕೋಲ್ಕತಾ: 11,900 ರೂ
  • ಕೇರಳ: 12,700 ರೂ
  • ಅಹ್ಮದಾಬಾದ್: 11,900 ರೂ
  • ಜೈಪುರ್: 11,900 ರೂ
  • ಲಕ್ನೋ: 11,900 ರೂ
  • ಭುವನೇಶ್ವರ್: 12,700 ರೂ
  • ಪುಣೆ: 11,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ