AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 September 15th: ಕಳೆದ ವಾರದ ಕೊನೆಯಲ್ಲಿ 10 ರೂ ಇಳಿದಿದ್ದ ಚಿನ್ನದ ಬೆಲೆ ಇವತ್ತು ಸೋಮವಾರವೂ 10 ರೂ ಇಳಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ 10,190 ರೂನಿಂದ 10,180 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 11,106 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 133 ರೂನಲ್ಲಿ ಇದ್ದರೆ, ಚೆನ್ನೈ ಹಾಗೂ ಇತರ ಕಡೆ 143 ರೂ ಇದೆ.

Gold Rate Today Bangalore: ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 15, 2025 | 10:51 AM

Share

ಬೆಂಗಳೂರು, ಸೆಪ್ಟೆಂಬರ್ 15: ಕಳೆದ ವಾರಾಂತ್ಯದಲ್ಲಿ ತುಸು ತಗ್ಗಿದ್ದ ಚಿನ್ನದ ಬೆಲೆ (gold rate) ಇವತ್ತು ಸೋಮವಾರವೂ ಅಲ್ಪ ಇಳಿಕೆ ಕಂಡಿದೆ. 10,190 ರೂ ಇದ್ದ ಚಿನ್ನದ ಬೆಲೆ 10 ರೂ ತಗ್ಗಿದ್ದು 10,180 ರೂಗೆ ಇಳಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆಯಲ್ಲಿ ಇವತ್ತು ವ್ಯತ್ಯಯ ಆಗಿಲ್ಲ. ಇನ್ನು, ವಾರಾಂತ್ಯದಲ್ಲಿ ಹೊಸ ದಾಖಲೆ ಬರೆದಿದ್ದ ಬೆಳ್ಳಿ ಬೆಲೆಯೂ ಇವತ್ತು ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,01,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,01,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,300 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,060 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,330 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,330 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 1,01,800 ರೂ
  • ಚೆನ್ನೈ: 1,01,800 ರೂ
  • ಮುಂಬೈ: 1,01,800 ರೂ
  • ದೆಹಲಿ: 1,01,950 ರೂ
  • ಕೋಲ್ಕತಾ: 1,01,800 ರೂ
  • ಕೇರಳ: 1,01,800 ರೂ
  • ಅಹ್ಮದಾಬಾದ್: 1,01,850 ರೂ
  • ಜೈಪುರ್: 1,01,950 ರೂ
  • ಲಕ್ನೋ: 1,01,950 ರೂ
  • ಭುವನೇಶ್ವರ್: 1,01,800 ರೂ

ಇದನ್ನೂ ಓದಿ: ಭಾರತ ಹೇಗೆ ಸಾಗಬೇಕು? ಮಲೇಷ್ಯಾವಾ, ಕೊರಿಯಾವಾ? ಭಾರತದ 16 ವರ್ಷದ ಜೀನಿಯಸ್ ಬಾಲಕ ಹೇಳೋದೇನು ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,730 ರಿಂಗಿಟ್ (99,290 ರುಪಾಯಿ)
  • ದುಬೈ: 4,072.50 ಡಿರಾಮ್ (97,880 ರುಪಾಯಿ)
  • ಅಮೆರಿಕ: 1,135 ಡಾಲರ್ (1,00,180 ರುಪಾಯಿ)
  • ಸಿಂಗಾಪುರ: 1,447 ಸಿಂಗಾಪುರ್ ಡಾಲರ್ (99,670 ರುಪಾಯಿ)
  • ಕತಾರ್: 4,075 ಕತಾರಿ ರಿಯಾಲ್ (98,670 ರೂ)
  • ಸೌದಿ ಅರೇಬಿಯಾ: 4,140 ಸೌದಿ ರಿಯಾಲ್ (97,420 ರುಪಾಯಿ)
  • ಓಮನ್: 430 ಒಮಾನಿ ರಿಯಾಲ್ (98,590 ರುಪಾಯಿ)
  • ಕುವೇತ್: 330.30 ಕುವೇತಿ ದಿನಾರ್ (95,470 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 13,300 ರೂ
  • ಚೆನ್ನೈ: 14,300 ರೂ
  • ಮುಂಬೈ: 13,300 ರೂ
  • ದೆಹಲಿ: 13,300 ರೂ
  • ಕೋಲ್ಕತಾ: 13,300 ರೂ
  • ಕೇರಳ: 14,300 ರೂ
  • ಅಹ್ಮದಾಬಾದ್: 13,300 ರೂ
  • ಜೈಪುರ್: 13,300 ರೂ
  • ಲಕ್ನೋ: 13,300 ರೂ
  • ಭುವನೇಶ್ವರ್: 14,300 ರೂ
  • ಪುಣೆ: 13,300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?