Gold Rates: ಸತತ ಮೂರನೇ ದಿನವೂ ಬೆಲೆ ಏರಿಕೆ ಕಂಡ ಬಂಗಾರ

Bullion Market 2026 April 16th: ಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಹೊಂದಿದೆ. 22 ಕ್ಯಾರಟ್ ಚಿನ್ನದ ಬೆಲೆ 14,240 ರೂನಿಂದ 14,260 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,557 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 270 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 275 ರೂ ಇದೆ.

Gold Rates: ಸತತ ಮೂರನೇ ದಿನವೂ ಬೆಲೆ ಏರಿಕೆ ಕಂಡ ಬಂಗಾರ
ಚಿನ್ನ
Image Credit source: Shutterstock

Updated on: Apr 16, 2026 | 10:50 AM

ಬೆಂಗಳೂರು, ಏಪ್ರಿಲ್ 16: ಚಿನ್ನದ ಬೆಲೆ ಸತತ ಮೂರನೇ ದಿನ ಏರಿಕೆ ಕಂಡಿದೆ. ಎರಡು ದಿನದಲ್ಲಿ 265 ರೂ ಹೆಚ್ಚಿದ್ದ ಬಂಗಾರದ ದರ (gold rates) ಇವತ್ತು ಗುರುವಾರ 20 ರೂಗಳಷ್ಟು ದುಬಾರಿಗೊಂಡಿದೆ. ಆದರೆ, ನಿನ್ನೆ ಭರ್ಜರಿಯಾಗಿ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,557 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,260 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,668 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,557 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,260 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,260 ರೂ
  • ಚೆನ್ನೈ: 14,360 ರೂ
  • ಮುಂಬೈ: 14,260 ರೂ
  • ದೆಹಲಿ: 14,275 ರೂ
  • ಕೋಲ್ಕತಾ: 14,260 ರೂ
  • ಕೇರಳ: 14,260 ರೂ
  • ಅಹ್ಮದಾಬಾದ್: 14,265 ರೂ
  • ಜೈಪುರ್: 14,275 ರೂ
  • ಲಕ್ನೋ: 14,275 ರೂ
  • ಭುವನೇಶ್ವರ್: 14,260 ರೂ

ಇದನ್ನೂ ಓದಿ: ವಿಶ್ವದ ದೊಡ್ಡ ಆರ್ಥಿಕತೆ: 5ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ ಭಾರತ; ಕಾರಣ ಏನು ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 589 ರಿಂಗಿಟ್ (13,909 ರುಪಾಯಿ)
  • ದುಬೈ: 535.25 ಡಿರಾಮ್ (13,590 ರುಪಾಯಿ)
  • ಅಮೆರಿಕ: 150 ಡಾಲರ್ (13,993 ರುಪಾಯಿ)
  • ಸಿಂಗಾಪುರ: 190.50 ಸಿಂಗಾಪುರ್ ಡಾಲರ್ (13,999 ರುಪಾಯಿ)
  • ಕತಾರ್: 534 ಕತಾರಿ ರಿಯಾಲ್ (13,664 ರೂ)
  • ಸೌದಿ ಅರೇಬಿಯಾ: 545 ಸೌದಿ ರಿಯಾಲ್ (13,550 ರುಪಾಯಿ)
  • ಓಮನ್: 57 ಒಮಾನಿ ರಿಯಾಲ್ (13,810 ರುಪಾಯಿ)
  • ಕುವೇತ್: 44.08 ಕುವೇತಿ ದಿನಾರ್ (13,422 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 270 ರೂ
  • ಚೆನ್ನೈ: 275 ರೂ
  • ಮುಂಬೈ: 270 ರೂ
  • ದೆಹಲಿ: 270 ರೂ
  • ಕೋಲ್ಕತಾ: 270 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 270 ರೂ
  • ಜೈಪುರ್: 270 ರೂ
  • ಲಕ್ನೋ: 270 ರೂ
  • ಭುವನೇಶ್ವರ್: 275 ರೂ
  • ಪುಣೆ: 270

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us