AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆ ಇಳಿಕೆ; ಚಿನ್ನದ ಬೆಲೆ ಅಲ್ಪ ಏರಿಕೆ

Bullion Market 2025 October 16th: ಸತತವಾಗಿ ಭರ್ಜರಿ ಏರಿಕೆ ಕಾಣುತ್ತಾ ಬಂದಿರುವ ಬೆಳ್ಳಿ ಬೆಲೆ ಇಂದು ಗುರುವಾರ 1 ರೂ ಕಡಿಮೆ ಆಗಿದೆ. ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 11,815 ರೂನಿಂದ 11,865 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,944 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 194 ರೂ ಆಗಿದೆ. ಮುಂಬೈ ಮೊದಲಾದೆಡೆ 189 ರೂಗೆ ಇಳಿದಿದೆ. ಚೆನ್ನೈ ಇತ್ಯಾದಿ ಕಡೆ 206 ರೂ ಆಗಿದೆ.

Gold Rate Today Bangalore: ಬೆಳ್ಳಿ ಬೆಲೆ ಇಳಿಕೆ; ಚಿನ್ನದ ಬೆಲೆ ಅಲ್ಪ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 16, 2025 | 10:33 AM

Share

ಬೆಂಗಳೂರು, ಅಕ್ಟೋಬರ್ 16: ಇಂದು ಗುರುವಾರ ಚಿನ್ನದ ಬೆಲೆ ಅಲ್ಪ ಹೆಚ್ಚಳ ಪಡೆದರೆ, ಬೆಳ್ಳಿ ಬೆಲೆ ಸ್ವಲ್ಪ ತಗ್ಗಿದೆ. ಈ ಬೆಳ್ಳಿಯ ಬೆಲೆ ಬಹಳ ಅಪರೂಪಕ್ಕೆ ಕಡಿಮೆಗೊಂಡಿದೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 5 ರೂನಷ್ಟು ಮಾತ್ರ ಏರಿಕೆ ಆಗಿದೆ. 18 ಕ್ಯಾರಟ್ ಚಿನ್ನಕ್ಕೂ ಬೇಡಿಕೆ ಹೆಚ್ಚುತ್ತಿದ್ದು, ಇದರ ಬೆಲೆ ಮೊದಲ ಬಾರಿಗೆ 9,700 ರೂ ಗಡಿ ದಾಟಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆಯಲ್ಲೂ ಚಿನ್ನದ ಬೆಲೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,18,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,29,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 18,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,18,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,944 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,865 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,708 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 189 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,944 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,865 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 194 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,865 ರೂ
  • ಚೆನ್ನೈ: 11,865 ರೂ
  • ಮುಂಬೈ: 11,865 ರೂ
  • ದೆಹಲಿ: 11,880 ರೂ
  • ಕೋಲ್ಕತಾ: 11,865 ರೂ
  • ಕೇರಳ: 11,865 ರೂ
  • ಅಹ್ಮದಾಬಾದ್: 11,870 ರೂ
  • ಜೈಪುರ್: 11,880 ರೂ
  • ಲಕ್ನೋ: 11,880 ರೂ
  • ಭುವನೇಶ್ವರ್: 11,865 ರೂ

ಇದನ್ನೂ ಓದಿ: ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಐಎಂಎಫ್​ನಿಂದಲೂ ನಿರೀಕ್ಷೆ ಹೆಚ್ಚಳ; ಶೇ. 6.4ರಿಂದ ಶೇ. 6.6ಕ್ಕೆ ಅಂದಾಜು ಪರಿಷ್ಕರಣೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 558 ರಿಂಗಿಟ್ (11,586 ರುಪಾಯಿ)
  • ದುಬೈ: 468.25 ಡಿರಾಮ್ (11,191 ರುಪಾಯಿ)
  • ಅಮೆರಿಕ: 130.50 ಡಾಲರ್ (11,455 ರುಪಾಯಿ)
  • ಸಿಂಗಾಪುರ: 169.20 ಸಿಂಗಾಪುರ್ ಡಾಲರ್ (11,473 ರುಪಾಯಿ)
  • ಕತಾರ್: 467.50 ಕತಾರಿ ರಿಯಾಲ್ (11,258 ರೂ)
  • ಸೌದಿ ಅರೇಬಿಯಾ: 476 ಸೌದಿ ರಿಯಾಲ್ (11,141 ರುಪಾಯಿ)
  • ಓಮನ್: 49.15 ಒಮಾನಿ ರಿಯಾಲ್ (11,207 ರುಪಾಯಿ)
  • ಕುವೇತ್: 38.36 ಕುವೇತಿ ದಿನಾರ್ (11,003 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 194 ರೂ
  • ಚೆನ್ನೈ: 206 ರೂ
  • ಮುಂಬೈ: 189 ರೂ
  • ದೆಹಲಿ: 189 ರೂ
  • ಕೋಲ್ಕತಾ: 189 ರೂ
  • ಕೇರಳ: 206 ರೂ
  • ಅಹ್ಮದಾಬಾದ್: 189 ರೂ
  • ಜೈಪುರ್: 189 ರೂ
  • ಲಕ್ನೋ: 189 ರೂ
  • ಭುವನೇಶ್ವರ್: 206 ರೂ
  • ಪುಣೆ: 189

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು