AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಮತ್ತೆ ಹೊಸ ದಾಖಲೆ

Bullion Market 2025 September 16th: ಇಂದು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಏರಿವೆ. ಚಿನ್ನದ ಬೆಲೆ 80 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 1 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 10,180 ರೂ ಇದ್ದದ್ದು 10,260 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 11,193 ರೂಗೆ ಹೆಚ್ಚಿದೆ. ಬೆಂಗಳೂರು, ಮುಂಬೈ ಇತ್ಯಾದಿ ಹೆಚ್ಚಿನ ಕಡೆ ಬೆಳ್ಳಿ ಬೆಲೆ 133 ರೂನಿಂ 134 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 144 ರೂಗೆ ಹೋಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಮತ್ತೆ ಹೊಸ ದಾಖಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 16, 2025 | 11:05 AM

Share

ಬೆಂಗಳೂರು, ಸೆಪ್ಟೆಂಬರ್ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳ ದಾಖಲೆ ಓಟ ಮತ್ತೆ ಶುರುವಾಗಿದೆ. ಇಂದು ಮಂಗಳವಾರ ಚಿನ್ನದ ಬೆಲೆಯಲ್ಲಿ 80 ರೂ ಹೆಚ್ಚಾದರೆ, ಬೆಳ್ಳಿ ಬೆಲೆ 1 ರೂನಷ್ಟು ದುಬಾರಿಗೊಂಡಿದೆ. ಆಭರಣ ಚಿನ್ನದ ಬೆಲೆ (gold rate) 10,250 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆ 11,200 ರೂ ಸಮೀಪಕ್ಕೆ ಹೋಗಿ ಹೊಸ ದಾಖಲೆ ಬರೆದಿದೆ. ವಿದೇಶಗಳಲ್ಲೂ ಸ್ವರ್ಣ ಬೆಲೆ ಗರಿಷ್ಠಕ್ಕೆ ಹೋಗಿದೆ. ಅಮೆರಿಕ, ಸಿಂಗಾಪುರಗಳಲ್ಲಿ ಬೆಲೆ 10,000 ರೂ ದಾಟಿದೆ. ಬೆಳ್ಳಿ ಬೆಲೆಯೂ 144 ರೂಗಳಿಗೆ ಹೋಗಿ ಹೊಸ ದಾಖಲೆ ಮಾಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,02,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,02,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,400 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,930 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,340 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,340 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 1,02,600 ರೂ
  • ಚೆನ್ನೈ: 1,02,600 ರೂ
  • ಮುಂಬೈ: 1,02,600 ರೂ
  • ದೆಹಲಿ: 1,02,750 ರೂ
  • ಕೋಲ್ಕತಾ: 1,02,600 ರೂ
  • ಕೇರಳ: 1,02,600 ರೂ
  • ಅಹ್ಮದಾಬಾದ್: 1,02,650 ರೂ
  • ಜೈಪುರ್: 1,02,750 ರೂ
  • ಲಕ್ನೋ: 1,02,750 ರೂ
  • ಭುವನೇಶ್ವರ್: 1,02,600 ರೂ

ಇದನ್ನೂ ಓದಿ: ಕೇವಲ ಒಂದೇ ಒಂದು ದಿನ ಐಟಿಆರ್ ಸಲ್ಲಿಕೆ ಗಡುವು ವಿಸ್ತರಣೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,730 ರಿಂಗಿಟ್ (99,160 ರುಪಾಯಿ)
  • ದುಬೈ: 4,080 ಡಿರಾಮ್ (97,930 ರುಪಾಯಿ)
  • ಅಮೆರಿಕ: 1,140 ಡಾಲರ್ (1,00,490 ರುಪಾಯಿ)
  • ಸಿಂಗಾಪುರ: 1,459 ಸಿಂಗಾಪುರ್ ಡಾಲರ್ (1,00,530 ರುಪಾಯಿ)
  • ಕತಾರ್: 4,095 ಕತಾರಿ ರಿಯಾಲ್ (99,030 ರೂ)
  • ಸೌದಿ ಅರೇಬಿಯಾ: 4,180 ಸೌದಿ ರಿಯಾಲ್ (98,240 ರುಪಾಯಿ)
  • ಓಮನ್: 434.50 ಒಮಾನಿ ರಿಯಾಲ್ (99,550 ರುಪಾಯಿ)
  • ಕುವೇತ್: 333.60 ಕುವೇತಿ ದಿನಾರ್ (96,350 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 13,400 ರೂ
  • ಚೆನ್ನೈ: 14,400 ರೂ
  • ಮುಂಬೈ: 13,400 ರೂ
  • ದೆಹಲಿ: 13,400 ರೂ
  • ಕೋಲ್ಕತಾ: 13,400 ರೂ
  • ಕೇರಳ: 14,400 ರೂ
  • ಅಹ್ಮದಾಬಾದ್: 13,400 ರೂ
  • ಜೈಪುರ್: 13,400 ರೂ
  • ಲಕ್ನೋ: 13,400 ರೂ
  • ಭುವನೇಶ್ವರ್: 14,400 ರೂ
  • ಪುಣೆ: 13,400

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?