AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 April 17th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಶುಕ್ರವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 125 ರೂ ತಗ್ಗಿದರೆ, ಬೆಳ್ಳಿ ಬೆಲೆ 5 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 14,260 ರೂನಿಂದ 14,135 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,420 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 265 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 275 ರೂ ಇದೆ.

Gold Rates: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 17, 2026 | 10:51 AM

Share

ಬೆಂಗಳೂರು, ಏಪ್ರಿಲ್ 17: ಸತತ ಮೂರು ದಿನ ಬೆಲೆ ಏರಿಕೆ ಕಂಡಿದ್ದ ಚಿನ್ನ ಇವತ್ತು ಸ್ವಲ್ಪ ತಗ್ಗಿದೆ. ಮೂರು ದಿನದಲ್ಲಿ ಹತ್ತಿರಹತ್ತಿರ 300 ರೂಗಳಷ್ಟು ಬೆಲೆ ಏರಿತ್ತು. ಇವತ್ತು ಶುಕ್ರವಾರ ಇದರ ಬೆಲೆ (Gold Rates) ಗ್ರಾಮ್​ಗೆ 125 ರೂಗಳಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತಗ್ಗಿದೆ. ಇರಾನ್ ಯುದ್ಧ ನಿಲ್ಲುವ ಆಶಯ ಸ್ವಲ್ಪ ಬಲಗೊಂಡಿರುವುದು ಇದಕ್ಕೆ ಕಾರಣವಿರಬಹುದು. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯಲ್ಲೂ ಇವತ್ತು ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 17ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,420 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,135 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,565 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,420 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,135 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,135 ರೂ
  • ಚೆನ್ನೈ: 14,210 ರೂ
  • ಮುಂಬೈ: 14,135 ರೂ
  • ದೆಹಲಿ: 14,150 ರೂ
  • ಕೋಲ್ಕತಾ: 14,135 ರೂ
  • ಕೇರಳ: 14,135 ರೂ
  • ಅಹ್ಮದಾಬಾದ್: 14,140 ರೂ
  • ಜೈಪುರ್: 14,150 ರೂ
  • ಲಕ್ನೋ: 14,150 ರೂ
  • ಭುವನೇಶ್ವರ್: 14,135 ರೂ

ಇದನ್ನೂ ಓದಿ: ಎಲ್​ಐಸಿಯಿಂದ ಎರಡು ಹೊಸ ಆ್ಯಪ್​ಗಳು ಬಿಡುಗಡೆ; ಗ್ರಾಹಕರಿಗೆ MyLIC, ಮಾರಾಟಗಾರರಿಗೆ Super Sales Saathi ಆ್ಯಪ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 582 ರಿಂಗಿಟ್ (13,657 ರುಪಾಯಿ)
  • ದುಬೈ: 535 ಡಿರಾಮ್ (13,529 ರುಪಾಯಿ)
  • ಅಮೆರಿಕ: 150 ಡಾಲರ್ (13,927 ರುಪಾಯಿ)
  • ಸಿಂಗಾಪುರ: 190.40 ಸಿಂಗಾಪುರ್ ಡಾಲರ್ (13,889 ರುಪಾಯಿ)
  • ಕತಾರ್: 532 ಕತಾರಿ ರಿಯಾಲ್ (13,551 ರೂ)
  • ಸೌದಿ ಅರೇಬಿಯಾ: 543 ಸೌದಿ ರಿಯಾಲ್ (13,442 ರುಪಾಯಿ)
  • ಓಮನ್: 57.05 ಒಮಾನಿ ರಿಯಾಲ್ (13,760 ರುಪಾಯಿ)
  • ಕುವೇತ್: 44.06 ಕುವೇತಿ ದಿನಾರ್ (13,362 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 265 ರೂ
  • ಚೆನ್ನೈ: 275 ರೂ
  • ಮುಂಬೈ: 265 ರೂ
  • ದೆಹಲಿ: 265 ರೂ
  • ಕೋಲ್ಕತಾ: 265 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 265 ರೂ
  • ಜೈಪುರ್: 265 ರೂ
  • ಲಕ್ನೋ: 265 ರೂ
  • ಭುವನೇಶ್ವರ್: 275 ರೂ
  • ಪುಣೆ: 265

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:49 am, Fri, 17 April 26

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More