AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ

Bullion Market 2026 February 17th: ನಿನ್ನೆ ಸೋಮವಾರ ಗ್ರಾಮ್​ಗೆ 120 ರೂನಷ್ಟು ಇಳಿದಿದ್ದ ಚಿನ್ನದ ಬೆಲೆ ಮಂಗಳವಾರ 140 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 14,340 ರೂನಿಂದ 14,200 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,491 ರೂಗೆ ತಗ್ಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 268 ರೂನಿಂದ 260 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 265 ರೂನಲ್ಲಿ ಇದೆ.

Gold Rate Today: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 17, 2026 | 11:14 AM

Share

ಬೆಂಗಳೂರು, ಫೆಬ್ರುವರಿ 17: ಚಿನ್ನ, ಬೆಳ್ಳಿ ಬೆಲೆಗಳೆರಡೂ ಮಂಗಳವಾರ ಕುಸಿತ ಕಂಡಿವೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಇಂದು ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ 140 ರೂ ಕಡಿಮೆ ಆಗಿದೆ. ಇದಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆಯ ಕುಸಿತ ಹೆಚ್ಚಿನ ತೀವ್ರತೆ ಹೊಂದಿದೆ. ಗ್ರಾಮ್​ಗೆ 8 ರೂನಷ್ಟು ಇಳಿಕೆ ಆಗಿದೆ. ಕಳೆದ ಐದು ದಿನಗಳ ಅಂತರದಲ್ಲಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 35 ರೂಗಳಷ್ಟು ಇಳಿಕೆ ಆಗಿದೆ. ಕಳೆದ ಮೂರು ವಾರಗಳಲ್ಲಿ ಇದರ ಬೆಲೆ 410 ರೂನಿಂದ 260 ರೂಗೆ ಇಳಿದಿದೆ. ಅಂದರೆ, ಶೇ. 60ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಬೆಲೆ ತಗ್ಗಿದೆ. ಜನವರಿ 10ರಂದು ಇದ್ದ ಬೆಲೆಗೆ ಸದ್ಯ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 17ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,491 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,200 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,618 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,491 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,200 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,200 ರೂ
  • ಚೆನ್ನೈ: 14,320 ರೂ
  • ಮುಂಬೈ: 14,200 ರೂ
  • ದೆಹಲಿ: 14,215 ರೂ
  • ಕೋಲ್ಕತಾ: 14,200 ರೂ
  • ಕೇರಳ: 14,200 ರೂ
  • ಅಹ್ಮದಾಬಾದ್: 14,205 ರೂ
  • ಜೈಪುರ್: 14,215 ರೂ
  • ಲಕ್ನೋ: 14,215 ರೂ
  • ಭುವನೇಶ್ವರ್: 14,200 ರೂ

ಇದನ್ನೂ ಓದಿ: ಅಮೆರಿಕದ ಟ್ಯಾರಿಫ್ ಪರಿಣಾಮ ನಡುವೆಯೂ ಜನವರಿಯಲ್ಲಿ ಭಾರತದ ರಫ್ತು ಶೇ. 13.16 ಹೆಚ್ಚಳ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 599 ರಿಂಗಿಟ್ (13,879 ರುಪಾಯಿ)
  • ದುಬೈ: 557.50 ಡಿರಾಮ್ (13,778 ರುಪಾಯಿ)
  • ಅಮೆರಿಕ: 155 ಡಾಲರ್ (14,066 ರುಪಾಯಿ)
  • ಸಿಂಗಾಪುರ: 195.50 ಸಿಂಗಾಪುರ್ ಡಾಲರ್ (14,048 ರುಪಾಯಿ)
  • ಕತಾರ್: 551 ಕತಾರಿ ರಿಯಾಲ್ (13,722 ರೂ)
  • ಸೌದಿ ಅರೇಬಿಯಾ: 563 ಸೌದಿ ರಿಯಾಲ್ (13,627 ರುಪಾಯಿ)
  • ಓಮನ್: 59.20 ಒಮಾನಿ ರಿಯಾಲ್ (13,958 ರುಪಾಯಿ)
  • ಕುವೇತ್: 45.53 ಕುವೇತಿ ದಿನಾರ್ (13,543 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ