Gold Rate Today Bangalore: ಮತ್ತಷ್ಟು ದುಬಾರಿಯಾದ ಚಿನ್ನ, ಬೆಳ್ಳಿ ಬೆಲೆ
Bullion Market 2025 December 18th: ಇಂದು ಗುರುವಾರ ಚಿನ್ನದ ಬೆಲೆ ಅಲ್ಪ ಹೆಚ್ಚಳ ಕಂಡರೆ, ಬೆಳ್ಳಿ ಬೆಲೆ ಮತ್ತೆ ಭರ್ಜರಿ ಜಿಗಿತ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 12,330 ರೂನಿಂದ 12,360 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,484 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 208 ರೂನಿಂದ 211 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 224 ರೂ ಆಗಿದೆ.

ಬೆಂಗಳೂರು, ಡಿಸೆಂಬರ್ 18: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ 30 ರೂ ಹೆಚ್ಚಿದರೆ, ಬೆಳ್ಳಿ ಬೆಲೆಯಲ್ಲಿ 3 ರೂಗಳಷ್ಟು ಭರ್ಜರಿ ಹೆಚ್ಚಳ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ (gold rate) ಅಲ್ಪ ಏರಿಕೆ ಆಗಿದೆ. ಬೆಳ್ಳಿ ಬೆಲೆಯಂತೂ ಮತ್ತೆ ಹೊಸ ದಾಖಲೆ ಬರೆದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 210 ರೂಗಳ ಮೈಲಿಗಲ್ಲು ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,23,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,34,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 21,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,23,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 21,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 22,400 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 18ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,484 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,360 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,113 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 211 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,484 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,360 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 211 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 12,360 ರೂ
- ಚೆನ್ನೈ: 12,440 ರೂ
- ಮುಂಬೈ: 12,360 ರೂ
- ದೆಹಲಿ: 12,375 ರೂ
- ಕೋಲ್ಕತಾ: 12,360 ರೂ
- ಕೇರಳ: 12,360 ರೂ
- ಅಹ್ಮದಾಬಾದ್: 12,365 ರೂ
- ಜೈಪುರ್: 12,375 ರೂ
- ಲಕ್ನೋ: 12,375 ರೂ
- ಭುವನೇಶ್ವರ್: 12,360 ರೂ
ಇದನ್ನೂ ಓದಿ: ಷೇರು, ಚಿನ್ನ, ಎಫ್ಡಿ- ಕಳೆದ 40 ವರ್ಷದಲ್ಲಿ ಅತಿಹೆಚ್ಚು ರಿಟರ್ನ್ ಕೊಟ್ಟ ಹೂಡಿಕೆಗಳ್ಯಾವುವು?
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 556 ರಿಂಗಿಟ್ (12,289 ರುಪಾಯಿ)
- ದುಬೈ: 484.75 ಡಿರಾಮ್ (11,924 ರುಪಾಯಿ)
- ಅಮೆರಿಕ: 134.50 ಡಾಲರ್ (12,152 ರುಪಾಯಿ)
- ಸಿಂಗಾಪುರ: 174.50 ಸಿಂಗಾಪುರ್ ಡಾಲರ್ (12,207 ರುಪಾಯಿ)
- ಕತಾರ್: 482.50 ಕತಾರಿ ರಿಯಾಲ್ (11,959 ರೂ)
- ಸೌದಿ ಅರೇಬಿಯಾ: 491 ಸೌದಿ ರಿಯಾಲ್ (11,827 ರುಪಾಯಿ)
- ಓಮನ್: 51.35 ಒಮಾನಿ ರಿಯಾಲ್ (12,051 ರುಪಾಯಿ)
- ಕುವೇತ್: 39.52 ಕುವೇತಿ ದಿನಾರ್ (11,634 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 211 ರೂ
- ಚೆನ್ನೈ: 224 ರೂ
- ಮುಂಬೈ: 211 ರೂ
- ದೆಹಲಿ: 211 ರೂ
- ಕೋಲ್ಕತಾ: 211 ರೂ
- ಕೇರಳ: 224 ರೂ
- ಅಹ್ಮದಾಬಾದ್: 211 ರೂ
- ಜೈಪುರ್: 211 ರೂ
- ಲಕ್ನೋ: 211 ರೂ
- ಭುವನೇಶ್ವರ್: 224 ರೂ
- ಪುಣೆ: 211
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ




