Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇವತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 August 1st: ನಿನ್ನೆ ಗುರುವಾರ ಇಳಿದ್ದ ಚಿನ್ನ, ಬೆಳ್ಳಿ ಬೆಲೆಗಳು ಇಂದೂ ಕುಸಿತ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 20 ರೂ, ಬೆಳ್ಳಿ ಬೆಲೆ 2 ರೂ ಕಡಿಮೆ ಆಗಿವೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,170 ರೂನಿಂದ 9,150 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,982 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 115 ರೂನಿಂದ 113 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 123 ರೂಗೆ ಇಳಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇವತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Aug 01, 2025 | 10:40 AM

ಬೆಂಗಳೂರು, ಆಗಸ್ಟ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಶುಕ್ರವಾರವೂ ಕುಸಿದಿವೆ. ಚಿನ್ನದ ಬೆಲೆ (gold rate) ಗ್ರಾಮ್​​ಗೆ 20 ರೂನಷ್ಟು ಅಲ್ಪ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಬರೋಬ್ಬರಿ 2 ರೂ ಕಡಿಮೆ ಆಗಿದೆ. ಹತ್ತು ದಿನಗಳ ಹಿಂದೆ 119 ರೂಗಳ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಬೆಳ್ಳಿ ಬೆಲೆ (silver rate) 6 ರೂ ಕಡಿಮೆಯಾಗಿ 113 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 10,000 ರೂಗಿಂತ ಒಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,820 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,130 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,130 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,500 ರೂ
  • ಚೆನ್ನೈ: 91,500 ರೂ
  • ಮುಂಬೈ: 91,500 ರೂ
  • ದೆಹಲಿ: 91,650 ರೂ
  • ಕೋಲ್ಕತಾ: 91,500 ರೂ
  • ಕೇರಳ: 91,500 ರೂ
  • ಅಹ್ಮದಾಬಾದ್: 91,550 ರೂ
  • ಜೈಪುರ್: 91,650 ರೂ
  • ಲಕ್ನೋ: 91,650 ರೂ
  • ಭುವನೇಶ್ವರ್: 91,500 ರೂ

ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,350 ರಿಂಗಿಟ್ (88,920 ರುಪಾಯಿ)
  • ದುಬೈ: 3,682.50 ಡಿರಾಮ್ (87,660 ರುಪಾಯಿ)
  • ಅಮೆರಿಕ: 1,030 ಡಾಲರ್ (90,080 ರುಪಾಯಿ)
  • ಸಿಂಗಾಪುರ: 1,328 ಸಿಂಗಾಪುರ್ ಡಾಲರ್ (89,510 ರುಪಾಯಿ)
  • ಕತಾರ್: 3,705 ಕತಾರಿ ರಿಯಾಲ್ (88,890 ರೂ)
  • ಸೌದಿ ಅರೇಬಿಯಾ: 3,770 ಸೌದಿ ರಿಯಾಲ್ (87,900 ರುಪಾಯಿ)
  • ಓಮನ್: 391.50 ಒಮಾನಿ ರಿಯಾಲ್ (88,990 ರುಪಾಯಿ)
  • ಕುವೇತ್: 300.40 ಕುವೇತಿ ದಿನಾರ್ (85,800 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,300 ರೂ
  • ಚೆನ್ನೈ: 12,300 ರೂ
  • ಮುಂಬೈ: 11,300 ರೂ
  • ದೆಹಲಿ: 11,300 ರೂ
  • ಕೋಲ್ಕತಾ: 11,300 ರೂ
  • ಕೇರಳ: 12,300 ರೂ
  • ಅಹ್ಮದಾಬಾದ್: 11,300 ರೂ
  • ಜೈಪುರ್: 11,300 ರೂ
  • ಲಕ್ನೋ: 11,300 ರೂ
  • ಭುವನೇಶ್ವರ್: 12,300 ರೂ
  • ಪುಣೆ: 11,300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us