
ಬೆಂಗಳೂರು, ಜನವರಿ 1: ಸತತ ಮೂರು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇಂದು ಗುರುವಾರ ಅಲ್ಪ ಏರಿಕೆ ಕಂಡಿದೆ. 15 ರೂ ಹೆಚ್ಚಳವಾಗಿರುವ ಆಭರಣ ಚಿನ್ನದ ಬೆಲೆ 12,400 ಗಡಿಗಿಂತ ಕೆಳಗೆ ಇಳಿದಿದೆ. ನಿನ್ನೆ ಚಿನ್ನದ ಬೆಲೆ 120 ರೂಗಳಷ್ಟು ಇಳಿಕೆಯಾಗಿತ್ತು. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ನಿನ್ನೆ ಒಂದು ರೂ ಇಳಿದಿದ್ದ ಇದರ ಬೆಲೆ ಇವತ್ತು ಕೂಡ ಒಂದು ರೂ ತಗ್ಗಿ 238 ರೂ ತಲುಪಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,23,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,35,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,23,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,600 ರೂ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: LPG Price: ಕಮರ್ಷಿಯಲ್ ಗ್ಯಾಸ್ ಬೆಲೆ ಭರ್ಜರಿ ಹೆಚ್ಚಳ; 19 ಕಿಲೋ ಸಿಲಿಂಡರ್ ದರ 110.50 ರೂ ಏರಿಕೆ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 11:48 am, Thu, 1 January 26